ETV Bharat / state

ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ : ಹೊಲಗಳಿಗೆ ನೀರು ನುಗ್ಗಿ ಬೆಳೆ ನಾಶ, ಮನೆ ಗೋಡೆಗಳು ಕುಸಿತ - ಯಾದಗಿರಿ ಜಿಲ್ಲೆಯಲ್ಲಿ ಮಳೆ ಅಬ್ಬರ

ಮನೆ ಗೋಡೆಗಳು ಕುಸಿದಿವೆ. ತಗ್ಗು ಜಾಗ, ರಸ್ತೆ, ಚರಂಡಿ, ಹೊಲಗದ್ದೆಗಳಲ್ಲಿ ನೀರು ಹರಿಯುತ್ತಿದ್ದು, ರಸ್ತೆಗಳು ಚರಂಡಿಗಳಂತಾಗಿವೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

Villages coverd with flood
ಜಲಾವೃತಗೊಂಡ ಗ್ರಾಮಗಳು
author img

By

Published : Aug 6, 2022, 5:52 PM IST

ಯಾದಗಿರಿ : ಜಿಲ್ಲೆಯ ವಿವಿಧೆಡೆ ಧಾರಕಾರವಾಗಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ವ್ಯಾಪಾರ ವಹಿವಾಟು ತಗ್ಗಿದ್ದು, ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿವೆ. ಹೊಲದಲ್ಲಿ ಮಳೆ ನೀರು ನುಗ್ಗಿ ಬೆಳೆ ನಾಶವಾಗಿದ್ದು, ರೈತರು ಪರಿಹಾರಕ್ಕಾಗಿ ಚಿಂತಿಸುವಂತಾಗಿದೆ. ಮನೆ ಗೋಡೆಗಳು ಕುಸಿದಿವೆ. ತಗ್ಗು ಜಾಗ, ರಸ್ತೆ, ಚರಂಡಿ, ಹೊಲಗದ್ದೆಗಳಲ್ಲಿ ನೀರು ಹರಿದಾಡುತ್ತಿದ್ದು, ರಸ್ತೆಗಳು ಚರಂಡಿಗಳಂತಾಗಿವೆ. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

ಮಳೆಯಿಂದಾಗಿ ಅಲ್ಲಿಪುರ ಗ್ರಾಮ ಸಂಪೂರ್ಣ ಜಲಾವೃತಗೊಂಡಿದ್ದು, ಗ್ರಾಮದಲ್ಲಿ ಸಾಬಣ್ಣ ಭೀಮರಾಯ, ರಾಮಣಗೌಡ ಶರಣಪ್ಪಗೌಡ, ಕಂಚಗಾರಹಳ್ಳಿ ಗ್ರಾಮದಲ್ಲಿ ಹೊನ್ನಮ್ಮ ಅಯ್ಯಪ್ಪ ಹಾಗೂ ನಾಗಮ್ಮ ದೇವಪ್ಪ, ಚಾಮನಹಳ್ಳಿ ಗ್ರಾಮದಲ್ಲಿ ಸಣ್ಣ ಹಣಮಂತ ಶರಣಪ್ಪ, ಈರಮ್ಮ ಶಂಕರಯ್ಯ ಸ್ವಾಮಿ ಮನೆಗಳು ಬಿದ್ದಿವೆ. ಸ್ಥಳಕ್ಕೆ ಉಪ ತಹಶೀಲ್ದಾರ್ ಮಹಮ್ಮದ್ ಶಕೀಲ್, ಮತ್ತೋರ್ವ ಅಧಿಕಾರಿ ರಾಜಶೇಖರ ಪಾಟೀಲ, ಗ್ರಾಮಲೆಕ್ಕಿಗ ಚನ್ನಬಸಪ್ಪ, ದೇವಿಕಾ ಭೇಟಿ ನೀಡಿದ್ದರು.

ಹೆಡಗಿಮದ್ರ ಗ್ರಾಮದ ಹೊಲಗಳಲ್ಲಿ ನೀರು ನಿಂತು ಸಂಪೂರ್ಣ ಬೆಳೆಗಳು ನಾಶವಾಗಿವೆ. ಇಲ್ಲಿನ ರೈತರಾದ ಗುಲುಮೆರ್, ಮನ್ಸೂರ್ ಪಟೇಲ್, ಸಲೀಮ್ ಖುರೇಷಿ ಅವರಿಗೆ ಸೇರಿದ ಹೊಲಗಳಲ್ಲಿ ಬೆಳೆಗಳು ಜಲಾವೃತವಾಗಿವೆ. ಹಲವು ಗ್ರಾಮಗಳಲ್ಲಿ ಮನೆಗೋಡೆಗಳು ಕುಸಿದಿದ್ದು, ಯಾವುದೇ ಜೀವಹಾನಿ ಆಗಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಜಲಾವೃತಗೊಂಡ ಗ್ರಾಮಗಳು

ಮಲಪ್ಪನಹಳ್ಳಿ, ವಡ್ಡನಹಳ್ಳಿ, ಕ್ಯಾಸಪ್ಪನಹಳ್ಳಿ, ಕಾನ್ನಳ್ಳಿ, ಬಸವಂತಪುರ, ಹೆಡಗಿಮದ್ರಾ, ಮುದ್ನಾಳ, ಠಾಣಗುಂದಿ, ಹೋರುಂಚ, ಅರಿಕೇರಾ (ಬಿ), ಬೊಮ್ಮಚಟ್ಟನಹಳ್ಳಿ, ಯಡ್ಡಳ್ಳಿ, ಬಂಡಳ್ಳಿ, ಬಾಚವಾರ, ಹತ್ತಿಕುಣಿ, ಚಾಮನಾಳ, ಹೂನಗೇರಾ, ಬೆಳಗೇರಾ, ಮಾಟನಹಳ್ಳಿ ಗ್ರಾಮಗಳಲ್ಲಿ ಮಳೆಯಾಗಿದೆ.

ಸಾಲ ಮಾಡಿ ಬಿತ್ತಿದ ಬೆಳೆಗಳು ನೀರುಪಾಲಾಗಿದ್ದು, ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಬಂದೊದಗಿದೆ. ಬೆಳೆ ಎಲ್ಲ ನೀರಿನಲ್ಲಿ ಹೋಗಿದ್ದು, ಕುಟುಂಬ ನಿರ್ವಹಣೆಯ ಬಗ್ಗೆ ಚಿಂತೆಯಾಗಿದೆ. ಅಧಿಕಾರಿಗಳು ಜಮೀನುಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಬೇಕಿದೆ ಎನ್ನುತ್ತಾರೆ ಹೆಡಗಿಮದ್ರ ರೈತ ಮನ್ಸೂರ್​ ಪಟೇಲ್​.

ಇದನ್ನೂ ಓದಿ : ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರು ಕಪಿಲ ನದಿಗೆ.. ನಂಜನಗೂಡಿನಲ್ಲಿ ಪ್ರವಾಹ ಭೀತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.