ಯಾದಗಿರಿ: ಕರೊನಾ ವೈಸರ್ ತಡೆಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಎಲ್ಲರೂ ಇದನ್ನು ಕಡ್ಡಾಯವಾಗಿ ಪಾಲಿಸಬೇಕಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಸೆಕ್ಷನ್ 144 ಜಾರಿಯಲ್ಲಿದ್ದು, ಜನರು ಅನಗತ್ಯವಾಗಿ ಹೊರಗಡೆ ಬರದೆ ಸರ್ಕಾರದ ಆದೇಶವನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಕುರ್ಮಾರಾವ್ ಎಂ. ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕರೊನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಇಬ್ಬರ ಸ್ಯಾಂಪಲ್ ತೆಗೆದು ಲ್ಯಾಬಿಗೆ ಕಳಿಸಿದ್ದು, ಅದರಲ್ಲಿ ಒಬ್ಬರ ವರದಿ ನೆಗೆಟಿವ್ ಬಂದಿದೆ. ಇನ್ನೊಬ್ಬರ ವರದಿ ಬರಬೇಕಾಗಿದೆ ಎಂದರು.
ದುಬೈ, ಸೌದಿ ಸೇರಿದಂತೆ ವಿದೇಶದಿಂದ ಜಿಲ್ಲೆಗೆ ವಾಪಸ್ ಆದ ಒಟ್ಟು 58 ಜನರನ್ನು ಹೋಮ್ ಕ್ವಾರಂಟೈನಲ್ಲಿ ಇರಿಸುವ ಮೂಲಕ ತೀವ್ರ ನಿಗಾ ವಹಿಸಲಾಗಿದೆ. ಮಧ್ಯರಾತ್ರಿಯಿಂದಲೇ ಯಾದಗಿರಿ ಜಿಲ್ಲೆ ಲಾಕ್ಡೌನ್ ಹಿನ್ನೆಲೆ 144 ಸೆಕ್ಷನ್ ಜಾರಿಗೊಳಿಸಿದ್ದು, ಯಾರೂ ಕೂಡ ಮನೆಯಿಂದ ಹೊರ ಬರಬಾರದೆಂದು ಸೂಚನೆ ನೀಡಿದರು.