ETV Bharat / state

ಹೋಂ ಕ್ವಾರಂಟೈನ್​ ನಿಯಮ ಉಲ್ಲಂಘನೆ: ಆರು ಜನರ ವಿರುದ್ಧ ಪ್ರಕರಣ

author img

By

Published : Jul 3, 2020, 10:36 PM IST

ಯಾದಗಿರಿಯಲ್ಲಿ ಹೋಂ ಕ್ವಾರಂಟೈನ್​ನಲ್ಲಿರಬೇಕಾದ ಆರು ವಲಸೆ ಕಾರ್ಮಿಕರು ನಿಯಮ ಉಲ್ಲಂಘಟನೆ ಮಾಡಿದ್ದಕ್ಕೆ, ಅವರು ವಿರುದ್ಧ 4 ಪ್ರಕರಣ ದಾಖಲಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ತಿಳಿಸಿದ್ದಾರೆ.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್

ಯಾದಗಿರಿ: ಹೊರ ರಾಜ್ಯದಿಂದ ಆಗಮಿಸಿದ ವಲಸೆ ಕಾರ್ಮಿಕರಿಗೆ ಹೋಂ ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಲಾಗಿತು. ಆದ್ರೂ ಸರ್ಕಾರದ ಆದೇಶವನ್ನು ಪಾಲಿಸದೆ ಸೋಂಕು ಹರಡುವ ರೀತಿಯಲ್ಲಿ ಹೊರಗಡೆ ತಿರುಗಾಡುವುದು ಕಂಡು ಬಂದಿದೆ. ಈ ಆರು ಜನರ ವಿರುದ್ಧ ಒಟ್ಟು 4 ಪ್ರಕರಣ ದಾಖಲಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್ ತಿಳಿಸಿದ್ದಾರೆ.

ಹೊರ ರಾಜ್ಯದಿಂದ ಆಗಮಿಸಿದ ವಲಸೆಗಾರರನ್ನು ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ನಿಗದಿತ ಅವಧಿ ಮುಕ್ತಾಯಗೊಂಡ ನಂತರ ಅವಲೋಕನೆಗಾಗಿ ಕೇಂದ್ರ/ರಾಜ್ಯ ಸರ್ಕಾರದ ಮಾರ್ಗಸೂಚಿ ಹಾಗೂ ಶಿಷ್ಟಾಚಾರದಂತೆ ಸ್ಟ್ಯಾಂಪಿಂಗ್ ಮತ್ತು ಹೆಲ್ತ್ ಸ್ಕ್ರೀನಿಂಗ್ ಮಾಡಿ ಹೋಂ ಕ್ವಾರಂಟೈನ್​ಗೆ ಕಳುಹಿಸಲಾಗುತ್ತದೆ. ಆದರೆ, ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ಹರಡಿಸುವ ದುರುದ್ದೇಶದಿಂದ ಗ್ರಾಮ/ತಾಂಡಾ/ತಾಲೂಕುಗಳಲ್ಲಿ ತಿರುಗಾಡುವುದು ಹೋಮ್ ಕ್ವಾರಂಟೈನ್, ಜಿಇಓ ಫೆನ್ಸಿಂಗ್ ಬ್ರೀಚ್ ಉಲ್ಲಂಘನೆಯಾಗಿರುವುದು ಕಂಡು ಬಂದಿದೆ.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್
ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ. ರಜಪೂತ್

ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ 3 ಜನರ ವಿರುದ್ಧ ಗುನ್ನೆ ನಂಬರ್:57/2020 ಐಪಿಸಿ 188, 269, 270ರ ಅಡಿಯಲ್ಲಿ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಮಾವಿನಗಿಡ ತಾಂಡಾದ ಒಬ್ಬ ವ್ಯಕ್ತಿಯ ವಿರುದ್ಧ ಗುನ್ನೆ ನಂಬರ್:55/2020 ಐಪಿಸಿ 188, 269, 270ರ ಅಡಿಯಲ್ಲಿ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜುಮಲಪೂರ ದೊಡ್ಡ ತಾಂಡಾದ ಒಬ್ಬ ವ್ಯಕ್ತಿಯ ವಿರುದ್ಧ ಗುನ್ನೆ ನಂಬರ್:56/2020 ಐಪಿಸಿ 188, 269, 270ರ ಅಡಿಯಲ್ಲಿ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅದೇ ರೀತಿ ಸುರಪುರ ತಾಲೂಕಿನ ರಂಗಂಪೇಟೆಯ ಒಬ್ಬ ವ್ಯಕ್ತಿಯ ವಿರುದ್ಧ ಗುನ್ನೆ ನಂಬರ್:162/2020 ಐಪಿಸಿ 188ರ ಅಡಿಯಲ್ಲಿ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಎಲ್ಲಾ ಪ್ರಕರಣಗಳು ತನಿಖೆ ಹಂತದಲ್ಲಿದ್ದು, ಸದರಿ ಆರೋಪಿಗಳನ್ನು ಪುನಃ ಸಾಂಸ್ಥಿಕ ದಿಗ್ಬಂಧನದ ಅವಲೋಕನೆಗಾಗಿ ಇರಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.