ಯಾದಗಿರಿ: ತೆಲಂಗಾಣದಲ್ಲಿ ನಡೆದ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಯಾದಗಿರಿಯಲ್ಲಿಂದು ಬೃಹತ್ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು. ಗುರುಮಠಕಲ್ ಖಾಸಾ ಮಠದ ಶಾಂತವೀರ ಮುರುಘರಾಜೇಂದ್ರ ಶ್ರೀಗಳ ನೇತ್ರತ್ವದಲ್ಲಿ ನಗರದ ಲಕ್ಷ್ಮೀ ದೇವಸ್ಥಾನದಿಂದ ಸುಭಾಷ್ ಸರ್ಕಲ್ವರೆಗೆ ಮೆರವಣಿಗೆ ನಡೆಸಲಾಯಿತು.
ಪಕ್ಷಾತೀತವಾಗಿ ರಾಜಕೀಯ ಮುಖಂಡರು, ಶಾಲಾ ವಿಧ್ಯಾರ್ಥಿಗಳು ಹಾಗೂ ಸ್ಥಳೀಯರು ಸ್ವಯಂ ಪ್ರೇರಿತವಾಗಿ ಕ್ಯಾಂಡಲ್ ಮಾರ್ಚ್ನಲ್ಲಿ ಪಾಲ್ಗೊಂಡಿದ್ದರು. ಶಾಲಾ ಮಕ್ಕಳು ಸ್ಟಾಪ್ ರೇಪ್ ಬೋರ್ಡ್ ಹಿಡಿದು ಮೆರವಣಿಗೆಯಲ್ಲಿ ಭಾಗಿಯಾಗಿ ವೈದ್ಯೆಯ ಹತ್ಯೆಯನ್ನು ಬಲವಾಗಿ ಖಂಡಿಸಿದರು.
ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಿ, ಸರ್ಕಾರ ಮಹಿಳೆಯರಿಗೆ ಸೂಕ್ತ ರಕ್ಷಣೆ ಕಲ್ಪಿಸುವ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದ್ರು.