ಯಾದಗಿರಿ: ಶೀಲ ಶಂಕಿಸಿದ ಪತಿ ಪತ್ನಿಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಾಧ್ವಾರ ಗ್ರಾಮದಲ್ಲಿ ಜರುಗಿದೆ.
ತಂದೆ ಓಡಿ ಹೋಗುವುದನ್ನು ಕಂಡ ಮಗ, ಸ್ಥಳಕ್ಕೆ ಬಂದು ನೋಡಿದಾಗ ತಾಯಿ ಕೊಲೆಯಾಗಿದ್ದು ಕಂಡುಬಂದಿದೆ. ನಂತರ ಸಂಬಂಧಿಕರಿಗೆ ಮಾಹಿತಿ ತಿಳಿಸಿದ್ದಾನೆ. ಆರೋಪಿ ಕಳೆದ 9 ವರ್ಷಗಳ ಹಿಂದೆ ಮದುವೆಯಾಗಿದ್ದನು. ಆದ್ರೆ, ಪತ್ನಿಯ ಮೇಲೆ ಸಂಶಯ ಹೊಂದಿದ್ದ ಎನ್ನಲಾಗುತ್ತಿದೆ. ಈ ವಿಷಯಕ್ಕೆ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕೇಸು ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ:RSS ಮಂಗಳೂರು ವಿಭಾಗ ಗ್ರಾಮವಿಕಾಸ ಪ್ರಮುಖ್ ವೆಂಕಟ್ರಮಣ ಹೊಳ್ಳ ಸಾವು