ETV Bharat / state

ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ.. ಶಾಸಕ ರಾಜುಗೌಡ - yadagiri today news

ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷನಾಗಿ ಉತ್ತಮ ಸೇವೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಎನ್ನಿಸಿದ್ರೆ, ಆಗ ಸ್ವೀಕರಿಸುತ್ತೇನೆ..

mla rajugouda
ಶಾಸಕ ರಾಜುಗೌಡ
author img

By

Published : Sep 18, 2020, 7:09 PM IST

ಸುರಪುರ : ಸಿಎಂ ಅವಧಿ ಮುಗಿಯುವವರೆಗೂ ಬಿಎಸ್​ವೈ ಅವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ನಾನು ಯಾವುದೇ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ಶಾಸಕ ಹಾಗೂ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ರಾಜುಗೌಡ ಸ್ಪಷ್ಟಪಡಿಸಿದ್ದಾರೆ.

ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದ ಶಾಸಕ ರಾಜುಗೌಡ

ಸದ್ಯ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ಬದಲಾವಣೆ ಹಾಗೂ ಸಚಿವಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಸಿಲ್ಲ. ರಾಜ್ಯದಲ್ಲಿ ಕೋವಿಡ್​ ಸಮಸ್ಯೆ ಹಾಗೂ ನಮ್ಮ ಭಾಗದಲ್ಲಿ ನೆರೆ ಸಮಸ್ಯೆ ಎದುರಿಸುತ್ತಿದ್ದೇವೆ. ಇಂತಹ ಜ್ವಲಂತ ಸಮಸ್ಯೆಗಳಿರುವಾಗ ನನಗೆ ಸಚಿವ ಸ್ಥಾನದ ಕುರಿತು ಯಾವುದೇ ಆಕಾಂಕ್ಷೆ ಇಲ್ಲ ಎಂದು ಹೇಳಿದರು.

ನನಗೆ ನೀಡಿರುವ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಅವಧಿಯಲ್ಲಿ ಉತ್ತಮ ಕೆಲಸ ಮಾಡಿ ತೋರಿಸುತ್ತೇನೆ. ಮುಂದಿನ ದಿನಗಳಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಎನ್ನಿಸಿದ್ರೆ, ಆಗ ಸ್ವೀಕರಿಸುತ್ತೇನೆ ಎಂದು ಉತ್ತರಿಸಿದರು.

ಉಪಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿ ನಡೆದಿಲ್ಲ. ಆದರೆ, ಎಸ್​ಟಿ ಸಮುದಾಯಕ್ಕೆ 7.5 ಮೀಸಲಾತಿ ನೀಡುವಂತೆ ಬೇಡಿಕೆ ಇರಿಸಿದ್ದೇವೆ ಎಂದು ಹೇಳಿದರು. ಈಚೆಗೆ ಸಚಿವ ಶ್ರೀರಾಮುಲು ಹಾಗೂ ರಮೇಶ್ ಜಾರಕಿಹೊಳಿ ಅವರ ಮಧ್ಯೆ ಉಪ ಮುಖ್ಯಮಂತ್ರಿ ಗಾದಿಗೇರುವ ಕುರಿತು ಪೈಪೋಟಿ ಏರ್ಪಟ್ಟಿರುವ ಕುರಿತು ಹಲವು ಚರ್ಚೆಗಳು ಕೇಳಿ ಬಂದಿದ್ದವು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.