ಯಾದಗಿರಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿದ ಪರಿಣಾಮ 9 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

ನಗರದ ದಿಗ್ಗಿ ಬೇಸ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿದ ಹುಚ್ಚು ನಾಯಿ ಮನಬಂದಂತೆ ಕಚ್ಚುತ್ತಾ ಓಡಾಡಿದೆ. ಪರಿಣಾಮ ಕಡಿತಕ್ಕೆ ಒಳಗಾದ ಮಕ್ಕಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು 9 ಜನ ಬಾಲಕರಲ್ಲಿ ಅಮಿತ್ ಮತ್ತು ಲೊಕೇಶ್ ಎಂಬ ಬಾಲಕರಿಗೆ ತೀವ್ರ ಗಾಯಗಳಾಗಿದ್ದು, ಆ ಬಾಲಕರನ್ನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಕ್ರಮಕ್ಕೆ ಮುಂದಾಗದ ನಗರಸಭೆ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.