ETV Bharat / state

ಗುರುಮಠಕಲ್: ಹದಗೆಟ್ಟ ರಸ್ತೆ ಸರಿಪಡಿಸುವಂತೆ ಜಯಕರ್ನಾಟಕ ಸಂಘಟನೆ ಪ್ರತಿಭಟನೆ - Jaya Karnataka Organization protests at Gurumathkal

ಗುರುಮಠಕಲ್ ತಾಲೂಕಿನಲ್ಲಿ ರಸ್ತೆ ಅವ್ಯವಸ್ಥೆಯಿಂದ ಜನರು ಪರದಾಡುತ್ತಿದ್ದಾರೆ. ಸಮಸ್ಯೆ ಸರಿಪಡಿಸಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆ ಪ್ರತಿಭಟನೆ ನಡೆಸಿದೆ.

dsd
ಜಯಕರ್ನಾಟಕ ಸಂಘಟನೆ ಪ್ರತಿಭಟನೆ
author img

By

Published : Sep 25, 2020, 11:22 AM IST

ಗುರುಮಠಕಲ್: ತಾಲೂಕಿನಲ್ಲಿರುವ ಹಳ್ಳಿಗಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಅವುಗಳನ್ನು ಸರಿಪಡಿಸಬೇಕು ಎಂದು ಜಯಕರ್ನಾಟಕ ಸಂಘಟನೆಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜಯಕರ್ನಾಟಕ ಸಂಘಟನೆ ಪ್ರತಿಭಟನೆ

ಈ ವೇಳೆ ಮಾತನಾಡಿದ ಜಯಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ನಾಗೇಶ್ ಗದ್ದಿಗಿ, ಹಲವು ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು ಎಲ್ಲೆಂದರಲ್ಲಿ ಗುಂಡಿಗಳು ಬಿದ್ದಿದ್ದು, ಅಪಘಾತಕ್ಕೆ ಎಡೆಮಾಡಿಕೊಟ್ಟಿದೆ. ಜಿಲ್ಲೆಯಲ್ಲಿ ಬಿಡುವಿಲ್ಲದ ಮಳೆ ಬರುತ್ತಿರುವುದರಿಂದ ಜನಸಾಮಾನ್ಯರು ರಸ್ತೆಗಳಲ್ಲಿ ಓಡಾಡಲು ನರಕಯಾತನೆ ಅನುಭವಿಸುತ್ತಿದ್ದಾರೆ.

ಆದಷ್ಟು ಬೇಗ ರಸ್ತೆಗಳನ್ನು ಸರಿಪಡಿಸದಿದ್ದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಂತರ ಸಮಸ್ಯೆ ಸರಿಪಡಿಸುವಂತೆ ತಹಶೀಲ್ದಾರ್​ ಮುಖಾಂತರ ಲೋಕೋಪಯೋಗಿ ಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.