ETV Bharat / state

ರೈತರ ಹೋರಾಟ ಬೆಂಬಲಿಸಿ ಯಾದಗಿರಿಯಲ್ಲಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

ಸರ್ಕಾರ ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ಜಾರಿಗೆ ತಂದಿದ್ದು, ಈ ಕಾಯ್ದೆಗಳನ್ನು ಹಿಂಪಡೆಯುವಂತೆ ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ರೈತರ ಬೇಡಿಕೆಗೆ ಬೆಂಬಲವಾಗಿ ಇಂದು ಯಾದಗಿರಿ ನಗರದಲ್ಲಿ ಕರವೇ, ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿತು.

Protest
ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ
author img

By

Published : Sep 25, 2020, 7:24 PM IST

ಯಾದಗಿರಿ: ರೈತ ವಿರೋಧಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ವಿರೋಧಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗಿದ್ದು, ರೈತರಿಗೆ ಬೆಂಬಲವಾಗಿ ನಗರದ ಸುಭಾಷ್ ವೃತ್ತದಲ್ಲಿ ಕರವೇ, ವಿಷ್ಣು ಸೇನಾ ಸಮಿತಿ ಮುಖಂಡರು ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿದರು.

ಕನ್ನಡಪರ ಸಂಘಟನೆ ವತಿಯಿಂದ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವಿಷ್ಣು ಸೇನಾ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದು, ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಜಾರಿಗೆ ತರುವ ಮೂಲಕ ರೈತರ ಜೀವನವನ್ನೇ ಸರ್ಕಾರ ಸರ್ವ ನಾಶ ಮಾಡ ಹೊರಟಿದೆ ಎಂದು ಘೋಷಣೆ ಕೂಗಿ, ಟೈರ್​​​​ಗೆ​ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ಕೂಡಲೇ ಸರ್ಕಾರ ಈ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಇದೇ ವೇಳೆ ಎಚ್ಚರಿಕೆ ನೀಡಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.