ಯಾದಗಿರಿ: ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹೆಣ್ಣು ಮಕ್ಕಳ ಸ್ವಯಂರಕ್ಷಣೆಗಾಗಿ ಜಿಲ್ಲಾ ಪೊಲೀಸ್ ವತಿಯಿಂದ ಕರಾಟೆ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಕಾಲೇಜು ಮತ್ತು ಹೈಸ್ಕೂಲಿನಲ್ಲಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ಜೊತೆಗೆ ಕಾನೂನಿನ ಅರಿವು ಮೂಡಿಸಲಾಯಿತು. ಯಾರೇ ಯಾವುದೇ ಅಪಾಯ ಮತ್ತು ತುರ್ತು ಪರಿಸ್ಥಿತಿಗೆ ಸಿಲುಕುವ ಮುನ್ಸೂಚನೆ ಇದ್ದಲ್ಲಿ ಪೊಲೀಸ್ ಸಹಾಯವಾಣಿ 112ಗೆ ಕಾಲ್ ಮಾಡಿದರೆ ಪೊಲೀಸರಿದ್ದ ವಾಹನ ಕೆಲವೇ ನಿಮಿಷದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಭಾಯಿಸುವರು ಎಂದು ಎಸ್ಪಿ ಡಾ. ಸಿ.ಬಿ. ವೇದಮೂರ್ತಿ ಹೇಳಿದರು.
ಗೃಹ ಸುರಕ್ಷಾ ಆ್ಯಪ್ ಬಳಸಲು, ಅಸ್ಪೃಶ್ಯತೆ ತಡೆಗಟ್ಟುವ, ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ, ಸಂಚಾರಿ ನಿಯಮಗಳನ್ನು ಪಾಲಿಸುವ, ಹೆಣ್ಣು ಮಕ್ಕಳು ತಮ್ಮ ಸ್ವರಕ್ಷಣೆಗಾಗಿ ಯಾವಾಗಲೂ ತಮ್ಮ ಜೊತೆಗೆ ಪೆಪ್ಪರ್ ಸ್ಪ್ರೇ ಮತ್ತು ಕಾರದಪುಡಿ ಇಟ್ಟುಕೊಳ್ಳಲು ಹಾಗೂ ಕಳ್ಳತನ ತಡೆಗಟ್ಟುವ ಕುರಿತು ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಮೂಡಿಸುವ ಕೆಲ ವಿಷಯಗಳ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.