ETV Bharat / state

ರಾಷ್ಟ್ರೀಯ ಹೆದ್ದರಿಯಲ್ಲಿ ಅನಧಿಕೃತ ಹತ್ತಿ ಕೇಂದ್ರ ಸ್ಥಾಪನೆ ಖಂಡಿಸಿ ಕರವೇ ಪ್ರತಿಭಟನೆ - ಅನಧಿಕೃತ ಹತ್ತಿ ಖರೀದಿ ಕೇಂದ್ರಗಳ ತಡೆಗಟ್ಟುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ

ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದರಿಗಳ ಮೇಲೆ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳು ಸ್ಥಾಪನೆಯಾಗಿದ್ದು, ಇವನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆಂದು ಆರೋಪಿಸಿ ಯಾದಗಿರಿಯಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಕರವೆ ಪ್ರತಿಭಟನೆ
author img

By

Published : Nov 25, 2019, 9:22 PM IST

ಯಾದಗಿರಿ: ಅಕ್ರಮ ಹತ್ತಿ ಖರೀದಿ ಕೇಂದ್ರಗಳ ಮೇಲೆ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಶಹಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಎದರು ಅನಿರ್ದಿಷ್ಟಾವಧಿ ಸತ್ಯಗ್ರಹ ನಡೆಸುತ್ತಿದ್ದಾರೆ.

ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದರಿಗಳ ಮೇಲೆ ಅನಧಿಕೃತ ಹತ್ತಿ ಖರೀದಿ ಕೇಂದ್ರಗಳು ಸ್ಥಾಪನೆಯಾಗುವ ಮೂಲಕ ದಲ್ಲಾಳಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದರು. ಅಕ್ರಮ ಹತ್ತಿ ಖರೀದಿ ಕೇಂದ್ರಗಳ ವಿರುದ್ಧ ಕ್ರಮಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಅನಧಿಕೃತ ಹತ್ತಿ ಕೇಂದ್ರ ಸ್ಥಾಪನೆ ಖಂಡಿಸಿ ಕರವೇ ಪ್ರತಿಭಟನೆ

ಕೃಷಿ ಉತ್ಪನ್ನ ಮಾರುಕಟ್ಟೆ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೈತರು ಬೆಳೆದ ಹತ್ತಿ ಬೆಳೆ ಮಹಾರಾಷ್ಟ್ರ, ಗುಜರಾತ್, ಹರಿಯಾಣ ರಾಜ್ಯಗಳ ಪಾಲಾಗುತ್ತಿದೆ. ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟವಾಗುತ್ತಿದೆ. ಇದನ್ನು ತಡೆಗಟ್ಟಿ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಆವರಣದಲ್ಲೇ ಹತ್ತಿ ಖರೀದಿ ಕೇಂದ್ರ ಸ್ಥಾಪನೆ ಮಾಡಿ ರೈತರಿಗೆ ಅನಕೂಲ ಮಾಡಿಕೊಡಬೇಕು. ಇಲ್ಲವಾದಲ್ಲಿ ತಮ್ಮ ಅನಿರ್ದಿಷ್ಟಾವಧಿ ಸತ್ಯಗ್ರಹ ಮುಂದುವರೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.

Intro:ಯಾದಗಿರಿ: ಅಕ್ರಮ ಹತ್ತಿ ಖರಿದಿ ಕೇಂದ್ರಗಳ ಮೇಲೆ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸುವಂತೆ ಆಗ್ರಹಿಸಿ ಕರವೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಹಪುರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಕಛೇರಿ ಎದರುಗಡೆ ಅನಿರ್ದಿಷ್ಟ ಸತ್ಯಗ್ರಹ ಧರಣಿ ನಡೆಸಿದಂತಾ ಕಾರ್ಯಕರ್ತರು ತಾಲ್ಲೂಕಿನ ರಾಜ್ಯ ಹೆದ್ದಾರಿ ಸೇರಿದಂತೆ ರಾಷ್ಟ್ರೀಯ ಹೆದ್ದರಿಗಳ ಮೇಲೆ ನೂರಾರು ಅನಾಧಿಕೃತ ಹತ್ತಿ ಖರಿದಿ ಕೇಂದ್ರಗಳು ಸ್ಥಾಪನೆ ಮಾಡುವ ಮೂಲಕ ದಲ್ಲಾಳಿಗಳು ರೈತರಿಗೆ ಮೋಸ ಮಾಡುತ್ತಿದ್ದಾರೆ ಅಂತ ಪ್ರತಿಭಟನಟನಿರತರು ಆರೋಪಿಸಿದ್ರು. ಅಕ್ರಮ ಹತ್ತಿ ಖರಿದಿ ಕೇಂದ್ರಗಳ ವಿರುದ್ದ ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ದ ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು.

Body:ಕೃಷಿ ಉತ್ಪನ್ನ ಮಾರುಕಟ್ಟೆ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ನಿರ್ಲಕ್ಷದಿಂದ ರೈತರು ಬೆಳೆದ ಹತ್ತಿ ಬೆಳೆ ಮಹಾರಾಷ್ಟ್ರ, ಗುಜರಾತ್, ಹರಿಯಾಣ, ರಜ್ಯಗಳ ಪಾಲಾಗುತ್ತಿದ್ದು ಸರ್ಕಾರದ ಬಕ್ಕಸಕ್ಕೆ ಕೊಟ್ಯಾಂತರ ರೂ ನಷ್ಟವಾಗುತ್ತಿದೆ, ಅನಾಧಿಕೃತ ಹತ್ತಿ ಖರಿದಿ ಕೇಂದ್ರಗಳ ಜೋತೆ ಅಧಿಕಾರಿಗಳು ಶಾಮಿಲಾಗಿದ್ದರೆ ಅಂತ ಧರಣಿ ನಿರತರು ಆರೋಪಿಸಿದ್ರು.

Conclusion:ಕೂಡಲೆ ಜಿಲ್ಲಾಡಳಿತ ಅನಾಧಿಕೃತ ಹತ್ತಿ ಖರಿದಿ ಕೇಂದ್ರಗಳ ವಿರುದ್ದ ಸೂಕ್ತ ಕ್ರಮ ಜರುಗಿಸುವ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆ ಆವರಣದಲ್ಲೆ ಹತ್ತಿ ಖರಿದಿ ಕೇಂದ್ರಗಳ ಸ್ಥಾಪನೆ ಮಾಡಿ ರೈತರಿಗೆ ಅನಕೂಲ ಮಾಡಿಕೊಡಬೇಕು, ಇಲ್ಲವಾದಲ್ಲಿ ತಮ್ಮ ಅನಿರ್ದಿಷ್ಟ ಸತ್ಯಗ್ರಾಹ ಮುಂದು ವರೆಸುವದಾಗಿ ಕರವೆ ಕಾರ್ಯಕರ್ತರು ಎಚ್ಚರಿಕೆ ನೀಡಿದ್ದಾರೆ..‌

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.