ETV Bharat / state

ಡಿಕೆಶಿ ಮನೆ ಮೇಲೆ ದಾಳಿ: ಕಾಂಗ್ರೆಸ್​​ ನಾಯಕರ ಹೇಳಿಕೆಗೆ ಈಶ್ವರಪ್ಪ ತಿರುಗೇಟು - ಸಚಿವ ಕೆಎಸ್ ಈಶ್ವರಪ್ಪ ಲೆಟೆಸ್ಟ್ ನ್ಯೂಸ್

ಮುಂಬರುವ ವಿಧಾನಸಭಾ ಉಪ ಚುನಾವಣೆ ಗೆಲ್ಲುವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಅಂತಾ ಅಪಪ್ರಚಾರ ಮಾಡುತ್ತಿದ್ದಾರೆ. ಸಿಬಿಐ ತನಿಖೆಗೆ ಸಿದ್ಧರಿದ್ದೀವಿ ಎಂದು ಹೇಳುವುದನ್ನು ಬಿಟ್ಟು, ಕಾಂಗ್ರೆಸ್​ನವರ ಮನೆ ಮೇಲಷ್ಟೇ ದಾಳಿ ನಡೆಯುತ್ತಿದೆ ಎಂದು ಹೇಳುತ್ತಿದ್ದೀರಾ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

KS Ishwarappa reaction on congress statement about CBI Raid
ಡಿಕೆಶಿ ಮನೆ ಮೇಲೆ ದಾಳಿ: ಕಾಂಗ್ರೆಸ್​​ನವರ ಹೇಳಿಕೆಗೆ ತಿರುಗೇಟು ನೀಡಿದ ಕೆಎಸ್ ಈಶ್ವರಪ್ಪ
author img

By

Published : Oct 8, 2020, 6:54 AM IST

ಯಾದಗಿರಿ: ಶಿರಾ ಮತ್ತು ಆರ್​​.ಆರ್ ನಗರ ವಿಧಾನಸಭಾ ಉಪ ಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ ಎನ್ನುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಯಾದಗಿರಿಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ನಗರದ ವಿದ್ಯಾಮಂಗಲ ಕಾರ್ಯಾಲಯದಲ್ಲಿ ನಡೆದ ಈಶಾನ್ಯ ವಲಯ ಶಿಕ್ಷಕರ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ನಾಯಕರನ್ನು ಹೊರತುಪಡಿಸಿ ಕಾಂಗ್ರೆಸ್​​ನವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಅಂತಾ ಕೈ ನಾಯಕರು ಆರೋಪ ಮಾಡುತ್ತಿದ್ದಾರೆ. ಕೋಟ್ಯಂತರ ಹವಾಲಾ ಹಣ ಡಿಕೆಶಿ ಮನೆಯಲ್ಲಿ ಸಿಗಲಿಲ್ವಾ? ಡಿಕೆಶಿ ಜೈಲಿಗೆ ಹೋಗಿ ಬರಲಿಲ್ವಾ? ಈಗ ತಮ್ಮ ಅಧ್ಯಕ್ಷ ಡಿಕೆಶಿ ಪರ ಕಾಂಗ್ರೆಸ್​ನವರು ಮಾತನಾಡುತ್ತಿದ್ದಾರೆ. ಮುಂಬರುವ ವಿಧಾನಸಭಾ ಉಪ ಚುನಾವಣೆ ಗೆಲ್ಲುವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಅಂತಾ ಅಪಪ್ರಚಾರ ಮಾಡುತ್ತಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಷ್ಟು ಜನ ಕಾಂಗ್ರೆಸ್ ನಾಯಕರ ಮನೆ ಮೇಲೆ ತನಿಖಾ ತಂಡದ ಅಧಿಕಾರಿಗಳಿಂದ ದಾಳಿ ‌ನಡೆದಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪ

ಲೋಕಸಭಾ ಚುನಾವಣೆ ಸೇರಿದಂತೆ ಕಳೆದ ವಿಧಾನಸಭಾ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಈ ಚುನಾವಣೆಗಳು ನಡೆದಾಗ ಯಾವ ಕಾಂಗ್ರೆಸ್ ನಾಯಕರ ಮನೆ‌ ಮೇಲೂ ದಾಳಿ‌ ನಡೆದಿಲ್ಲ. ಶಿರಾ ಮತ್ತು ಆರ್.​ಆರ್ ನಗರ ವಿಧಾನಸಭಾ ಉಪ ಚುನಾವಣೆಗಳಲ್ಲಿ ಸೋಲುವ ಹತಾಶೆಯಿಂದ ಕಾಂಗ್ರೆಸ್ ನಾಯಕರು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಟಾಂಗ್ ನೀಡಿದರು. ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು. ತಪ್ಪು ಮಾಡಿದವರು ಈಗ ಅನುಭವಿಸಬೇಕಾಗಿದೆ ಎಂದು ಡಿಕೆಶಿ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂದರು.

ಈ ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರ ಇದ್ದ ವೇಳೆ ಸಿಎಂ ಬಿ.ಎಸ್.ಯಡಿಯೂರಪ್ಪನವರ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ರಿ. ಇದು ಸರಿನಾ? ಆದ್ರೆ ಅಂದು ಬಿಎಸ್​​ವೈ ಅವರಿಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ. ಯಡಿಯೂರಪ್ಪ ಅವರಿಗೆ ನ್ಯಾಯಾಲಯದಿಂದ ನ್ಯಾಯ ಸಿಕ್ಕಿದೆ. ಸಿಬಿಐ ತನಿಖೆಗೆ ಸಿದ್ಧರಿದ್ದೀವಿ ಎಂದು ಹೇಳುವುದನ್ನು ಬಿಟ್ಟು, ಕಾಂಗ್ರೆಸ್​ನವರ ಮನೆ ಮೇಲಷ್ಟೇ ದಾಳಿ ನಡೆಯುತ್ತಿದೆ ಎಂದು ಹೇಳುತ್ತಿದ್ದೀರಾ ಎಂದು ಕಾಂಗ್ರೆಸ್ ನಾಯಕರ ಹೇಳಿಕೆಗೆ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.