ಸುರಪುರ: ಧಾರವಾಡ ಜಿಲ್ಲೆಯ ಬೇಗೂರು ಗ್ರಾಮದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗೆ ಮರಣ ದಂಡನೆಗೆ ಒತ್ತಾಯಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ತಹಶೀಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಧಾರವಾಡ ಜಿಲ್ಲೆಯ ಬೇಗೂರು ಗ್ರಾಮದಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ನಂತರ ಅವಳ ಸಾವಿಗೆ ಕಾರಣನಾದ ಬಷೀರನನ್ನು ಮರಣದಂಡನೆಗೆ ಗುರಿಪಡಿಸುವಂತೆ ಆಗ್ರಹಿಸಿದರು.
ಆರೋಪಿ ಬಷೀರ್‌ಗೆ ಶೀಘ್ರದಲ್ಲಿ ಶಿಕ್ಷೆಯಾಗದಿದ್ದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷ ಮಂಜುನಾಥ ಜಾಲಹಳ್ಳಿ ಮಾಜಿ ನಯೋಪ್ರಾ ಅಧ್ಯಕ್ಷ ಸೂಗುರೇಶ ವಾರದ್, ಜಿಲ್ಲಾಧ್ಯಕ್ಷ ಪ್ರದೀಪ್ ದೊಡ್ಮನಿ , ಜಗದೀಶ್ ಪಾಟೀಲ್, ವಿರೇಶ ಪಂಚಾಂಗಮಠ ಶರಣಪ್ಪ ,ಕಳ್ಳಿಮನಿ ಸಿದ್ದನಗೌಡ, ಹೆಬ್ಬಾಳ ಆನಂದ ಮಡ್ಡಿ ಸೇರಿದಂತೆ ಅನೇಕರಿದ್ದರು.