ಯಾದಗಿರಿ: ಚೌಡೇಶ್ವರಿಹಾಳ ಗ್ರಾಮದಲ್ಲಿ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಮಾದಿಗ ಯುವ ಸೇನೆ ವತಿಯಿಂದ ಹುಣಸಗಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಹುಣಸಗಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಪತಿಭಟನಾಕಾರರು ಜಮಾಯಿಸಿ ಮಾನವ ಸರಪಳಿ ರಚಿಸಿ ಪ್ರತಿಭಟಿಸಿದರು. ಆರೋಪಿಯನ್ನು ಉಗ್ರ ಶಿಕ್ಷಗೆ ಒಳಪಡಿಸಬೇಕು ಎಂದು ಪಟ್ಟು ಹಿಡಿದರು.
ನೂರಾರು ಜನ ಜಮಾಯಿಸಿದ್ದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಈ ವೇಳೆ, ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಅಶೋಕ್ ಕುಮಾರ್ ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತನಾಡಿದರು. ಈ ವೇಳೆ, ಮನವಿ ಪತ್ರ ನೀಡಿ ಶಿಕ್ಷಿಗೆ ಆಗ್ರಹಿಸಿದರು.
ಭಾನುವಾರ ಸುರಪುರ ತಾಲೂಕಿನ ಚೌಡೇಶ್ವರಿಹಾಳ ಗ್ರಾಮದ ದಲಿತ ಮಹಿಳೆ ಮೇಲೆ ಕಾಮುಕನೊಬ್ಬ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದನು. ಅದಕ್ಕೆ ನೀರಾಕರಿಸಿದ ಮಹಿಳೆ ಮೇಲೆ ಕಾಮುಕ ಪೆಟ್ರೋಲ್ ಸುರಿದ ಬೆಂಕಿ ಹಚ್ಚಿದ್ದನು.
ಇದನ್ನೂ ಓದಿ : ಸುರಪುರ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ
ಇದನ್ನೂ ಓದಿ: ಸುರಪುರ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ.. ಮಹಿಳೆ ಶವವಿಟ್ಟು ಪ್ರತಿಭಟನೆ