ಯಾದಗಿರಿ: ಕೃಷ್ಣಾ ನದಿಯ ದಡದಲ್ಲಿ ಬುಧವಾರ ಸೌದೆ ತರಲು ಹೋಗಿದ್ದ ತಾಲೂಕಿನ ಕೊಂಕಲ್ ಗ್ರಾಮದ ವ್ಯಕ್ತಿ ಮೊಸಳೆ ದಾಳಿಗೆ ಒಳಗಾಗಿದ್ದು, ಗುರುವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾನೆ.
ರಾತ್ರಿ ವೇಳೆಯಲ್ಲಿ ಮೀನುಗಾರರು ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದರೂ ದೇಹ ಪತ್ತೆಯಾಗಿರಲಿಲ್ಲ. ಆದರೆ, ಬೆಳಗ್ಗೆ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಸುರೇಶ ಅಂಕಲಗಿ, ಕಂದಾಯ ನಿರೀಕ್ಷಕ ಸಂಜುಕುಮಾರ ಕವಲಿ, ಅಗ್ನಿ ಶಾಮಕ ದಳದ ಅಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಮಾಹಿತಿ ಪಡೆದರು. ಈ ಕುರಿತು ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಎಸಿಬಿ ದಾಳಿ ಪ್ರಕರಣ: ಭ್ರಷ್ಟ ಅಧಿಕಾರಿಗಳ ಬಳಿ ಶೇ. 800, 550, 400 ರಷ್ಟು ಅಧಿಕ ಅಕ್ರಮ ಆಸ್ತಿ ಪತ್ತೆ!