ಯಾದಗಿರಿ: ಕ್ಷುಲ್ಲಕ ಕಾರಣಕ್ಕೆ ಕಲ್ಲಿನಿಂದ ಜಜ್ಜಿ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಯಾದಗಿರಿ ತಾಲ್ಲೂಕಿನ ನಾಗಲಾಪುರ ಗ್ರಾಮದಲ್ಲಿ ನಡೆದಿದೆ.
ಸಾಬಣ್ಣ (35) ನಾಗಲಾಪುರ ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಜನ್ನಪ್ಪ ಎಂಬಾತ ಕೊಲೆ ಮಾಡಿದ ಆರೋಪಿ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೈದಾಪುರ ಸಿಪಿಐ ವಿಜಯಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.