ಯಾದಗಿರಿ: ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಸಂಯೋಗದೊಂದಿಗೆ ಕೆರೆಗಳ ಹೂಳೆತ್ತುವ ಯೋಜನೆಯ ಕಾರ್ಯಾಗಾರ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರಗೌಡ ವಜ್ಜಲ್ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, ಈ ಯೋಜನೆಯಿಂದಾಗಿ ಅನೇಕ ಕೆರೆಗಳ ಹೂಳನ್ನು ತೆಗೆಯಲಾಗಿದ್ದು, ಇದು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದರಿಂದಾಗಿ ಈ ಭಾಗದ ರೈತರಿಗೆ ಮತ್ತು ಸಾರ್ವಜನಿಕರಿಗೆ ಸಾಕಷ್ಟು ಸಹಾಯವಾಗಲಿದ್ದು, ಇದಕ್ಕೆ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದ್ದು ಗಮನಾರ್ಹ ಎಂದು ಹೇಳಿದರು.
ಇನ್ನು ಜಿಲ್ಲಾಧಿಕಾರಿ ಎಂ.ಕುರ್ಮಾರಾವ್ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ರಮಕ್ಕೆ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಕೆರೆಗಳ ಹೂಳನ್ನು ತೆಗೆಯುವದರಿಂದ ಸಾಕಷ್ಟು ಪ್ರಯೋಜನವಾಗಲಿದೆ ಎಂದರು.