ETV Bharat / state

ಹೊರ ರಾಜ್ಯಗಳಿಂದ ಮರಳುವ ವಲಸೆ ಕಾರ್ಮಿಕರಿಗೆ ಕ್ವಾರಂಟೈನ್ ಕಡ್ಡಾಯ: ಎ.ಬಿ. ಇಬ್ರಾಹಿಂ - ಕೋವಿಡ್-19

ಯಾದಗಿರಿ ಜಿಲ್ಲೆಗೆ ಮರಳುವ ವಲಸೆ ಕಾರ್ಮಿಕರಿಗೆ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಸೂಚಿಸಿದರು.

Yadgiri
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ
author img

By

Published : May 12, 2020, 8:29 AM IST

ಯಾದಗಿರಿ: ಹೊರ ರಾಜ್ಯಗಳಿಂದ ಜಿಲ್ಲೆಗೆ ಮರಳುವ ವಲಸೆ ಕಾರ್ಮಿಕರಿಗೆ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್ ಮಾಡಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಕಾರ್ಯದರ್ಶಿ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ.ಬಿ. ಇಬ್ರಾಹಿಂ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ಸಂಬಂಧ ಜಿಲ್ಲಾಡಳಿತ ಕೈಗೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿವರವಾದ ಮಾಹಿತಿಯನ್ನು ಪಡೆದುಕೊಂಡ ಅವರು, ಜಿಲ್ಲೆಯು ಹಸಿರು ವಲಯ ಆಗಿರುವುದು ಸಂತೋಷದ ಸಂಗತಿ. ಜಿಲ್ಲಾಡಳಿತದ ಮುಂಜಾಗ್ರತಾ ಕ್ರಮ ಹಾಗೂ ಕಂದಾಯ, ಆರೋಗ್ಯ, ಪೊಲೀಸ್ ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳ ನಿರಂತರ ಶ್ರಮ ಇದಕ್ಕೆ ಕಾರಣ ಎಂದು ಶ್ಲಾಘಿಸಿದರು.

ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗಳಿಂದ ಯಾದಗಿರಿ ಜಿಲ್ಲೆಗೆ ಮೇ 10 ರವರೆಗೆ 403 ಬಸ್‍ಗಳಲ್ಲಿ 10,537 ಕಾರ್ಮಿಕರು ಆಗಮಿಸಿದ್ದಾರೆ. ಹೊರ ರಾಜ್ಯಗಳಿಂದ ಬಂದ ಮತ್ತು ಬರುತ್ತಿರುವ ಕಾರ್ಮಿಕರನ್ನು ಇನ್‍ಸ್ಟಿಟ್ಯೂಶನಲ್ ಕ್ವಾರಂಟೈನ್‍ನಲ್ಲಿ ಇರಿಸಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳನ್ನು ಕ್ವಾರಂಟೈನ್ ಕೇಂದ್ರಗಳಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಜಿ.ಪಂ ಸಿಇಓ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.