ETV Bharat / state

ರಾಜ್ಯದ ಶೇ. 5ರಷ್ಟು ಕೊರೊನಾ ಸೋಂಕಿತರಲ್ಲಿ ಮಾತ್ರ ರೋಗದ ಲಕ್ಷಣ: ಸಚಿವ ಸುಧಾಕರ್ - Minister K Sudhakar press meet in yadagiri

ಜುಲೈನಲ್ಲಿ ಕೋವಿಡ್-19 ಎರಡನೇ ಅಲೆ ಸೃಷ್ಟಿಯಾಗುತ್ತೆ ಅಂತ ಪರಿಣಿತರು ವರದಿ ಕೊಟ್ಟಿದ್ದಾರೆ. ಈ ವರದಿಯ ಅನುಸಾರವಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಭರದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.

Minister K Sudhakar press meet in yadagiri
ಸಚಿವ ಸುಧಾಕರ್
author img

By

Published : Jun 14, 2020, 3:58 AM IST

ಯಾದಗಿರಿ: ರಾಜ್ಯದಲ್ಲಿ 6,516 ಕೊರೊನಾ ಪಾಸಿಟಿವ್ ಪ್ರಕರಣಗಳಿವೆ, ಅದರಲ್ಲಿ 3,440 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 2,995 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಲ್ಲಿ 95 ಪ್ರತಿಷತ ಮಂದಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ರಾಜ್ಯದಲ್ಲಿ 164 ಮಂದಿಯಲ್ಲಿ ಸೋಂಕಿತರಲ್ಲಿ ರೋಗದ ಲಕ್ಷಣಗಳಿವೆ. ಶೇ. 5ರಷ್ಟು ಸೋಂಕಿತರಲ್ಲಿ ಮಾತ್ರ ರೋಗದ ಲಕ್ಷಣಗಳಿದ್ದು, 19 ಮಂದಿ ಸೋಂಕಿತರು ಐಸಿಯುನಲ್ಲಿದ್ದಾರೆ. 735 ಪಾಸಿಟಿವ್ ಪ್ರಕರಣಗಳಿರುವ ಯಾದಗಿರಿಯಲ್ಲಿ ಒಬ್ಬರೂ ಸಹ ಐಸಿಯುನಲ್ಲಿ. ಜಿಲ್ಲೆಯಲ್ಲಿ 480 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ತಿಳಿಸಿದರು.

ಸಚಿವ ಡಾ. ಕೆ. ಸುಧಾಕರ್ ಸುದ್ದಿಗೋಷ್ಠಿ

ಯಾದಗಿರಿ ಮತ್ತು ಉಡುಪಿಯಲ್ಲಿ ಮಹಾರಾಷ್ಟ್ರದಿಂದ ಬಂದವರಲ್ಲೇ ಸೋಂಕು ಹೆಚ್ಚು ಪತ್ತೆಯಾಗಿದೆ. ಯಾದಗಿರಿ ಜಿಲ್ಲೆಗೆ ಮಹಾರಾಷ್ಟ್ರದಿಂದ ಬರುವವರ ಮೇಲೆ ನಿಗಾ ಇಡಲಾಗಿದೆ ಯಾವುದೇ ಆತಂಕ ಬೇಡ, ಬಂದವರನ್ನ ಸಾಂಸ್ಥಿಕ ಕೇಂದ್ರದಲ್ಲಿ ಕ್ವಾರಂಟೈನ್ ಮಾಡಲಾಗುತ್ತಿದೆ. ಸಾರ್ವಜನಿಕರು ಭಯಪಡದೆ ಸರ್ಕಾರದ ಎಲ್ಲಾ ಆದೇಶಗಳನ್ನು ಪಾಸಿಸವ ಮೂಲಕ ಕೊರೊನಾ ನಿರ್ಮೂಲನೆಗೆ ಕೈ ಜೋಡಿಸಬೇಕು ಅಂತ ಸಾರ್ವಜನಿಕರಲ್ಲಿ ಸಚಿವ ಸುಧಾಕರ ಮನವಿ ಮಾಡಿದರು.

ಜುಲೈನಲ್ಲಿ ಕೋವಿಡ್-19 ಎರಡನೇ ಅಲೆ ಸೃಷ್ಟಿಯಾಗುತ್ತೆ ಅಂತ ಪರಿಣಿತರು ವರದಿ ಕೊಟ್ಟಿದ್ದಾರೆ. ಈ ವರದಿಯ ಅನುಸಾರವಾಗಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ಭರದಿಂದ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.. ಈಗಾಗಲೇ ಕ್ವಾರಂಟೈನ್ ಕೇಂದ್ರಗಳು, ಆರೋಗ್ಯ ಸಿಬ್ಬಂದಿ ನೇಮಕಾತಿ, ಕೊವಿಡ್ ಆಸ್ಪತ್ರೆಯಲ್ಲಿ ಬೆಡ್​​ಗಳು, ಸೇರಿದಂತೆ ಎಲ್ಲಾ ಮುಂಜಾಗ್ರತಾ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.