ಸುರಪುರ (ಯಾದಗಿರಿ): ಶಾಸಕ ನರಸಿಂಹ ನಾಯಕ ರಾಜುಗೌಡ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳರನ್ನು ಭೇಟಿ ಮಾಡಿ, ಕಾಲುವೆಗೆ ನೀರು ಹರಿಸುವಂತೆ ಮನವಿ ಮಾಡಿಕೊಂಡರು.
ಸುರಪುರದ ಜನಪ್ರಿಯ ಶಾಸಕರಾದ ರಾಜುಗೌಡ ಇಂದು ವಿಜಯಪುರಕ್ಕೆ ಆಗಮಿಸಿ, ರಾಜ್ಯದ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾದ ಗೋವಿಂದ ಕಾರಜೋಳ ಅವರನ್ನು ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ, ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ಗೋವಿಂದ ಕಾರಜೋಳ ಅವರನ್ನು ವಿನಂತಿಸಿದರು.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಶಾಸಕರು ಮನವಿಯಲ್ಲಿ ಉಲ್ಲೇಖಿಸಿದಂತೆ ಇದೇ 21/07/2020ರಿಂದ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.