ಯಾದಗಿರಿ: ನಗರದ ಶಾಸ್ತ್ರಿ ವೃತ್ತದಿಂದ ರೈಲ್ವೆ ನಿಲ್ದಾಣದವರಗೆ ನಡೆಯುತ್ತಿರುವ ಚರಂಡಿ ಕಾಮಗಾರಿಯಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ಎಸಗಲು ಮುಂದಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
1.25 ಕೋಟಿ ರೂ. ಅನುದಾನದಲ್ಲಿ ನಗರದ ಶಾಸ್ತ್ರಿ ಸರ್ಕಲ್ನಿಂದ ರೈಲ್ವೆ ನಿಲ್ದಾಣದವರಗೆ ಚರಂಡಿ ಕಾಮಗಾರಿ ನಡೆಸಲಾಗುತ್ತಿದೆ. ಚರಂಡಿ ಸರಿಯಾಗಿ ಇದ್ದರೂ ಅದನ್ನು ಹೊಡೆದುಹಾಕಿ ಹೊಸ ಚರಂಡಿ ನಿರ್ಮಾಣ ಮಾಡುತ್ತಿದ್ದಾರೆ. ಚರಂಡಿ ಮಾಡುವಂತೆ ಸ್ಥಳೀಯರಾಗಲಿ, ಸಂಘ ಸಂಸ್ಥೆಗಳಾಗಲಿ ಅಧಿಕಾರಿಗಳಿಗೆ ಮನವಿ ಮಾಡಿಲ್ಲ. ಆದರೂ ಅನಾವಶ್ಯಕವಾಗಿ ಹಣ ಪೋಲು ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಅಧಿಕಾರಿಗಳು ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಮಂಡಳಿಯಿಂದ ಅನುದಾನ ಪಡೆದು ಅನಾವಶ್ಯಕವಾಗಿ ನಿರ್ಣಯ ತೆಗೆದುಕೊಂಡು ಹಣ ಪೋಲು ಮಾಡುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾಧಿಕಾರಿ, ಅನಾವಶ್ಯಕ ಕಾಮಗಾರಿ ನಡೆದಿದ್ದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.