ETV Bharat / state

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಕಟೀಲ್ ಸ್ಪಷ್ಟನೆ

ಪರಿಶಿಷ್ಟ ಪಂಗಡಕ್ಕೆ 7.5 ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕುರಿತು ಮಾತನಾಡಿ, ಇದು ಕಾನೂನಿನ ಅಡಿಯಲ್ಲಿ ಏನು ಸಾಧ್ಯವೋ ಅದನ್ನು ಸರ್ಕಾರ ಮಾಡಲಿದೆ ಎಂದು ಹಾರಿಕೆ ಉತ್ತರ ನೀಡಿದರು..

nalinkumar-katil-talk-about-leadership-change-in-the-state-bjp
ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಕಟೀಲ್ ಸ್ಪಷ್ಟನೆ
author img

By

Published : Oct 20, 2020, 5:59 PM IST

ಸುರಪುರ: ಎರಡು ವಿಧಾನಸಭಾ ಹಾಗೂ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ತಮ್ಮ ಪಕ್ಷ ಸ್ಪಷ್ಟ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಕಟೀಲ್ ಸ್ಪಷ್ಟನೆ

ಸುರಪುರದ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷದ ನಾಯಕತ್ವ ಬದಲಾವಣೆ ಇಲ್ಲ. ಮುಂದಿನ ಮೂರು ವರ್ಷ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇದೇ ಸಂದರ್ಭದಲ್ಲಿ ಪರಿಶಿಷ್ಟ ಪಂಗಡಕ್ಕೆ 7.5 ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕುರಿತು ಮಾತನಾಡಿ, ಇದು ಕಾನೂನಿನ ಅಡಿಯಲ್ಲಿ ಏನು ಸಾಧ್ಯವೋ ಅದನ್ನು ಸರ್ಕಾರ ಮಾಡಲಿದೆ ಎಂದು ಹಾರಿಕೆ ಉತ್ತರ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ರಾಜುಗೌಡ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಸೇಡಂ ಶಾಸಕ ರಾಜಕುಮಾರ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಶರಣ ಭೂಪಾಲರೆಡ್ಡಿ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.