ಸುರಪುರ /ಯಾದಗಿರಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಹುಣಸಿಗಿ ತಾಲೂಕಿನ ನಾರಾಯಣಪುರ ಜಲಾಶಯ ಭರ್ತಿಯಾಗುತ್ತಿದೆ.
ಒಟ್ಟು 33.3113 ಟಿಎಂಸಿ ಸಾಮರ್ಥ್ಯದ ಬಸವಸಾಗರ ಜಲಾಶಯದಲ್ಲಿ ಸದ್ಯ 32 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೇ ಒಳಹರಿವು ಕೂಡ 80000 ಕ್ಯೂಸೆಕ್ಗೆ ಹೆಚ್ಚಳವಾಗಿದ್ದು, ಮಹಾರಾಷ್ಟ್ರ ಗಡಿ ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಒಳಹರಿವು ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಸದ್ಯ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಹೊರಹರಿವಿನ ಪ್ರಮಾಣ ಇನ್ನೂ ಹೆಚ್ಚುವ ಸಾಧ್ಯತೆ ಇದೆ. ಅಲ್ಲದೆ ಕೃಷಿ ಕಾಲುವೆಗಳಿಗೆ 6000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಒಳಹರಿವು ಹೆಚ್ಚಿದಂತೆಲ್ಲ ಕೃಷ್ಣಾ ನದಿಗೆ ಬಿಡುವ ನೀರಿನ ಪ್ರಮಾಣ ಹೆಚ್ಚುವ ಸಾಧ್ಯತೆ ಇರುವುದರಿಂದ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ಕಾಯ್ದುಕೊಳ್ಳುವಂತೆ ಸೂಚಿಸಲಾಗಿದೆ.
ಬೆಳಗಿನ ಜಾವ 1 ಲಕ್ಷದ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಬಿಡುಗಡೆ ಮಾಡಲಾಗಿತ್ತು. ಈಗ 1 ಲಕ್ಷದ 50 ಸಾವಿರ ಕ್ಯೂಸೆಕ್ಗೆ ಹೆಚ್ಚಿಸಲಾಗಿದೆ.