ಯಾದಗಿರಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ ಬಿ ಇಬ್ರಾಹಿಂ ಅವರು ತಾಲೂಕಿನ ಅಲ್ಲಿಪೂರ ಗ್ರಾಮದ ನರೇಗಾ ಯೋಜನೆಯಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕೂಲಿಕಾರರೊಂದಿಗೆ ಮಾತನಾಡಿದ ಅವರು, ಕೂಲಿಗಾರರಿಗೆ ಸಿಗುವ ಕೂಲಿ, ಎಷ್ಟು ದಿನಗಳಿಂದ ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಯಾರು ಕರೆದುಕೊಂಡು ಬರುತ್ತಿದ್ದಾರೆ ಎನ್ನುವ ಮಾಹಿತಿ ಪಡೆದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕೆರೆಯ ಹೂಳೆತ್ತುವ ಕಾಮಗಾರಿಯಲ್ಲಿ 115 ಜನ ಕೂಲಿಕಾರರು ಮಾಡುತ್ತಿದ್ದು, ಕಾಮಗಾರಿಯ ಸ್ಥಳದಲ್ಲಿ ನೆರಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಕೂಲಿಕಾರರಿಗೆ ಗ್ರಾಮ ಪಂಚಾಯತ್ ವತಿಯಿಂದ ಮಾಸ್ಕ್ಗಳನ್ನು ವಿತರಿಸಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗಿದೆ ಎಂದರು.