ಗುರುಮಠಕಲ್: ಗುರುಮಠಕಲ್ ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ್ ಹಾಗೂ ವಿವಿಧ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಪುರಸಭೆ ಸದಸ್ಯರು ಉದ್ಘಾಟಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಯಾದಗರಿ, ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯ ಕೃಷ್ಣ ಮೇದಾ ಮಾತನಾಡಿ, ಸೆಪ್ಟೆಂಬರ್ ತಿಂಗಳನ್ನು ಪೋಷಣ್ ತಿಂಗಳು ಎಂದು ಆಚರಿಸಲಾಗುತ್ತದೆ ಎಂದರು.
ಈ ಯೋಜನೆಯಡಿ ಗರ್ಭಧಾರಣೆಯಿಂದ ಹಿಡಿದು ಶಿಶು ಮತ್ತು ತಾಯಂದಿರು 100 ದಿನಗಳ ಕಾಲ ಉತ್ತಮ ಪೌಷ್ಟಿಕ ಆಹಾರ ಸೇವನೆ ಮಾಡುವುದು. ರಕ್ತ ಹೀನತೆ, ಅತಿಸಾರ ಭೇದಿ ತಡೆಗಟ್ಟುವುದು, ಪೌಷ್ಟಿಕ ಆಹಾರ ಪೂರೈಕೆ ಮಾಡುವುದರ ಮೂಲಕ ತಾಯಿ ಮತ್ತು ಶಿಶುವಿನ ಉತ್ತಮ ಆರೋಗ್ಯ ಕಾಪಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಎಂದರು.
ರಾಷ್ಟ್ರೀಯ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವನ್ನು ಅಂಗನವಾಡಿ, ಆಶಾ ಕಾರ್ಯಕರ್ತೆಯರು ಪ್ರತಿ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪರಿಣಾಮಕಾರಿಯಾಗಿ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ಮಕ್ಕಳಿಂದ ವಿವಿಧ ಹಣ್ಣು ಮತ್ತು ತರಕಾರಿಗಳ ಫ್ಯಾನ್ಸಿಡ್ರೆಸ್ ಕಾರ್ಯಕ್ರಮದಲ್ಲಿ 6 ರಿಂದ 8 ತಿಂಗಳ ಮಕ್ಕಳಿಗೆ ಅನ್ನಪ್ರಸನ್ನ 3 ವರ್ಷದ ಮಕ್ಕಳಿಗೆ ಅಕ್ಷರ ಕಾರ್ಯಕ್ರಮ ಗರ್ಭಿಣಿಯರಿಗೆ ಸೀಮಂತ ಕಾಯಕ್ರಮ ಮಾಡಿದರು.
ಈ ಕಾರ್ಯಕ್ರಮದಲ್ಲಿ ಪುರಸಭೆ ಸದಸ್ಯರು ನವಾಜ್ ರೆಡ್ಡಿ ಪೊಲೀಸ್ ಪಾಟೀಲ್, ರವಿ ಪಾಟೀಲ್ ಗವಿನೋಳ್ ಹಾಗೂ ಅಂಗವಾಡಿ ಸಹಾಯಕಿ ದೇವಕಿ, ಅನಸೂಜಮ್ಮ ಸೇರಿದಂತೆ ಇತರರು ಇದ್ದರು.