ಯಾದಗಿರಿ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಣೆ ಮಾಡಲಾಯಿತು.
ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶಿವನಗೌಡ ಉದ್ಘಾಟಿಸಿದ್ರು.
ಇದೇ ವೇಳೆ ನೂತನ ಮತದಾರರಿಗೆ ಮೊದಲ ಬಾರಿಗೆ ಡಿಜಿಟಲ್ ಮತದಾನ ಪತ್ರವನ್ನು ನೀಡಲಾಯಿತು.. ಇನ್ನೂ ಅತೀ ಹೆಚ್ಚು ಮತದಾರರ ಪಟ್ಟಿಯನ್ನು ತಯಾರಿಸಿದ ಶಿಕ್ಷಕರುಗಳಿಗೆ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾಡಳಿತದ ವತಿಯಿಂದ ಮತದಾನದ ಮಹತ್ವ ತಿಳಿಸುವ ನಿಟ್ಟಿನಲ್ಲಿ ಏರ್ಪಡಿಸಿದ್ದ ನಾಟಕ, ಗಾಯನ, ರಂಗೋಲಿ, ಭಾಷಣ, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಂ ಕೂರ್ಮರಾವ್, ಜಿ.ಪಂ ಸಿಇಓ ಶಿಲ್ಪಾ ಶರ್ಮಾ, ಎಸಿ ಶಂಕರಗೌಡ, ಡಿವೈಎಸ್ಪಿ ಶರಣಪ್ಪ ಸೇರಿದಂತೆ ವಿವಿಧ ನ್ಯಾಯಾಲಯದ ವಕೀಲರು ಭಾಗಿಯಾಗಿದ್ರು.