ETV Bharat / state

ಗುರುಮಠಕಲ್ ಗ್ರೀನ್ ಝೋನ್​​ನಲ್ಲಿದ್ದರೂ  ಕಟ್ಟುನಿಟ್ಟಿನ ಲಾಕ್​​ಡೌನ್​​​ - ಲಾಕ್ ಡೌನ್ ಸಡಿಲಿಕೆಗೆ ಬ್ರೇಕ್ ಹಾಕಿದ ಜಿಲ್ಲಾಡಳಿತ

ಕಳೆದ ಕೆಲವು ದಿನಗಳಿಂದ ಇತರ ರಾಜ್ಯಗಳಿಂದ ವಲಸೆ ಕಾರ್ಮಿಕರು ಹಾಗೂ ಯಾತ್ರಿಕರು ಜಿಲ್ಲೆಗೆ ವಾಪಸ್​​​ ಆಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ವೈರಸ್ ಸೋಂಕು ವ್ಯಕ್ತಿಗಳಿಂದ ವ್ಯಕ್ತಿಗಳಿಗೆ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ 144 ನೇ ಕಲಂ ಅನ್ವಯ ನಿಷೇದಾಜ್ಞೆ ಹೊರಡಿಸಲಾಗಿದೆ.

No Lockdown Relaxation Gurmatkal
ಲಾಕ್ ಡೌನ್ ಸಡಿಲಿಕೆಗೆ ಬ್ರೇಕ್
author img

By

Published : May 12, 2020, 2:22 PM IST

ಗುರುಮಠಕಲ್: ಸದ್ಯ ಗ್ರೀನ್ ಝೋನ್ ನಲ್ಲಿರುವ ಯಾದಗಿರಿ ಜಿಲ್ಲೆಯ ಕೊರೊನಾ ಸೋಂಕು ಹರಡುವ ಭೀತಿ ಹೆಚ್ಚಾಗಿದೆ. ಹೀಗಾಗಿ ಸಡಲಿಕೆಯಾಗಿದ್ದ ಲಾಕ್​​​​​ಡೌನ್ ಅನ್ನು ಮುಂಜಾಗ್ರತಾ ಕ್ರಮವಾಗಿ ಮತ್ತಷ್ಟು ಬಿಗಿ ಮಾಡಲಾಗಿದೆ. ಮೊದಲನೇ ಹಂತದಲ್ಲಿ, ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಇತರ ರಾಜ್ಯಗಳಿಂದ ವಲಸೆ ಕಾರ್ಮಿಕರು ಹಾಗೂ ಯಾತ್ರಿಕರು ಜಿಲ್ಲೆಗೆ ವಾಪಸ್​ ಆಗುತ್ತಿದ್ದಾರೆ. ಈ ಹಿನ್ನೆ ಲೆಯಲ್ಲಿ ಕೊರೊನಾ ವೈರಸ್ ಸೋಂಕು ವ್ಯಕ್ತಿಗಳಿಂದ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಕೋವಿಡ್-19 ರ 144 ನಿಷೇದಾಜ್ಞೆಯನ್ನ ಜಾರಿ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಅದರನ್ವಯ ಪಟ್ಟಣದಲ್ಲಿಯೂ ಬಿಗಿ ಲಾಕ್ ಡೌನ್ ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ಕೇವಲ ತರಕಾರಿ ಮತ್ತು ಆಸ್ಪತ್ರೆ, ಮೆಡಿಕಲ್ ಶಾಪ್ ತೆರೆಯಲು ಮಾತ್ರ ಅವಕಾಶ ನೀಡಲಾಗಿದೆ. ಇನ್ನು ಇದರ ಜೊತೆಗೆ ವೈನ್ ಶಾಪ್ ಸಹ ಬಂದ್ ಮಾಡಲಾಗಿದೆ. ಜಿಲ್ಲಾಧಿಕಾರಿ ಎಂ ಕೂರ್ಮರಾವ್ ಸೂಚನೆ ಮೇರೆಗೆ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ ಈ ಆದೇಶ ಹೊರಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.