ETV Bharat / state

ಯಾದಗಿರಿ : ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ - officials ride on unauthorised driniking water unit at yadagiri

ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕುಡಿಯುವ ನೀರಿನ ಘಟಕಗಳನ್ನು ನಡೆಸುತ್ತಿದ್ದವರ ಮೇಲೆ ನಗರಸಭೆ ಅಧ್ಯಕ್ಷ ಸುರೇಶ್ ಅಂಬಿಗೇರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಅಪಾರ ಪ್ರಮಾಣದ ಪ್ಲಾಸ್ಟಿಕ್ ವಶಪಡಿಸಿಕೊಳ್ಳಲಾಗಿದೆ..

officials-ride-on-unauthorised-drinking-water-unit-at-yadagiri
ಯಾದಗಿರಿ : ಶುದ್ಧ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ
author img

By

Published : May 21, 2022, 3:39 PM IST

ಯಾದಗಿರಿ : ನಗರಸಭೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಡೆಸುತ್ತಿರುವವರ ಮೇಲೆ ನಗರಸಭೆ ಅಧ್ಯಕ್ಷ ಸುರೇಶ್ ಅಂಬಿಗೇರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ನಗರದ ಅಜೀಜ್‌ ಕಾಲೋನಿಯ ಮೆಟ್ರೋ, ಸಹರಾ ಕಾಲೋನಿ ಬಳಿಯಿರುವ ನಿಬ್ರಾಸ್ ಮಿನರಲ್ ವಾಟರ್ ಘಟಕದ ಮೇಲೆ ದಾಳಿ ನಡೆಸಲಾಗಿದೆ.

ಅಕ್ರಮವಾಗಿ ನಡೆಯುತ್ತಿದ್ದ ನೀರಿನ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ ಅವರು ಅಕ್ರಮ ನೀರಿನ ಘಟಕಗಳ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಘಟಕದಲ್ಲಿ ಅವಧಿ ಮೀರಿದ ನೀರಿನ ಪಾಕೆಟ್, ರಾಸಾಯನಿಕಗಳನ್ನು ಪತ್ತೆ ಹಚ್ಚಲಾಗಿದೆ. ಹಲವಾರು ವರ್ಷಗಳಿಂದ ದಂಧೆ ನಡೆಸುತ್ತಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.

ಅಕ್ರಮವಾಗಿ ನಡೆಸುತ್ತಿದ್ದ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ

ಘಟಕದ ಮಾಲೀಕರನ್ನು ಈ ಬಗ್ಗೆ ಪ್ರಶ್ನಿಸಿದರೆ ಸರಿಯಾದ ಉತ್ತರ ನೀಡಿಲ್ಲ. ಇದರಿಂದ ಕೋಪಗೊಂಡ ಅಂಬಿಗೇರ್ ಎಲ್ಲಾ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸಲು ನಗರಸಭೆಯಿಂದ ಅನುಮತಿ ಪಡೆಯಬೇಕು.

ನೀರು ಮಾರಾಟ ಮಾಡುವವರು ಕಡ್ಡಾಯವಾಗಿ ಐಎಸ್‌ಐ ಮಾರ್ಕ್ ಹೊಂದಿರಬೇಕು. ಜೊತೆಗೆ ಪ್ರಾಧಿಕಾರದಿಂದ ಅನುಮತಿ ಪಡೆಯಬೇಕು. ಆದರೆ, ಇದ್ಯಾವುದು ಇಲ್ಲದಿರುವುದು ದಾಳಿ ವೇಳೆ ತಿಳಿದು ಬಂದಿದೆ.

ಓದಿ : ಪ್ರಿಯತಮೆ ಆತ್ಮಹತ್ಯೆಯಿಂದ ಮನನೊಂದು ಪ್ರಿಯಕರ ಆತ್ಮಹತ್ಯೆ : ಆರು ತಿಂಗಳ ಬಳಿಕ ಅಸ್ತಿಪಂಜರವಾಗಿ ಶವ ಪತ್ತೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.