ಯಾದಗಿರಿ: ನಗರದ ಹಳೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ವರೆ ವರ್ಷಗಳಿಂದ ಹಳೆ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿದ್ದು, ಇನ್ನು ಪೂರ್ಣಗೊಂಡಿಲ್ಲ. ಸುಮಾರು ಐದು ಕೋಟೆ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡರು ಕೂಡ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನ ಕ್ಷೀಪ್ರವಾಗಿ ಮುಗಿಸಿದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಂಜೆಯಾದರೆ ಹಳೆ ಬಸ್ ನಿಲ್ದಾಣದಲ್ಲಿ ಕುಡಕರ ಹಾವಳಿ ಹೆಚ್ಚಾಗುತ್ತಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಗ್ರಾಮೀಣ ಪ್ರದೇಶಗಳಿಗೆ ತೇರಳುವ ಮಹಿಳೆಯರು ಹಾಗೂ ಪುರುಷರು ಕುಡಕರ ಕಾಟದಿಂದ ಬೇಸತ್ತಿದ್ದಾರೆ. ಅಲ್ಲದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲ್ಲು ಯಾವುದೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಿದೆ ಬೇಜವಬ್ದಾರಿ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.