ಯಾದಗಿರಿ: ಸುರಪುರ ತಾಲೂಕಿನಲ್ಲಿ ಮನೆಯೊಂದರ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 46 ಕೆಜಿ ಗಾಂಜಾ ಮಿಶ್ರಿತ ಚಾಕೋಲೆಟ್ ವಶಪಡಿಸಿಕೊಂಡಿರುವ ಘಟನೆ ನಗರದ ಹಳೇ ಬಸ್ ನಿಲ್ದಾಣದ ಜಲಾಲ್ಲ ಮೊಹಲ್ಲಾದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಮಾದಕ ವಸ್ತು ಸಮೇತ ಓರ್ವನನ್ನು ಬಂಧಿಸಿದ್ದಾರೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ ಎಂದು ಅಬಕಾರಿ ಡಿವೈಎಸ್‌ಪಿ ಮಲ್ಲಿಕಾರ್ಜುನ ರೆಡ್ಡಿ ತಿಳಿಸಿದರು.
ಗಾಂಜಾ ಮಿಶ್ರಿತ ಚಾಕೋಲೆಟ್ ಬೆಲೆ 50 ರಿಂದ 220 ರೂ.ಗಳಿದ್ದು ಬೇಡಿಕೆಗೆ ಅನುಗುಣವಾಗಿ ಬೆಲೆ ನಿಗದಿ ಮಾಡುತ್ತಾರೆ. ಇಂತಹ ಅಮಲಿಗೆ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ವಿಷಾದನೀಯ ಎಂದು ಅಬಕಾರಿ ಡಿವೈಎಸ್‌ಪಿ ತಿಳಿಸಿದರು. ಅಬಕಾರಿ ನಿರೀಕ್ಷಕ ಜಾಫರ್‌ಮಿಯಾ, ಯಾದಗಿರಿ ವಿಚಕ್ಷಣ ದಳ ಅಧಿಕಾರಿ ಕೇದಾರನಾಥ್, ಶಹಾಪುರ ಉಪವಿಭಾಗದ ಧನರಾಜ್, ಎಸ್‌ಐಗಳಾದ ಸುರೇಶ ಮಾಳೇಕರ, ರಾಜಣ್ಣ ಹಾಗೂ ಸಿಬ್ಬಂದಿ ಇದ್ದರು.
ಇದನ್ನೂ ಓದಿ: ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ