ETV Bharat / state

'ಒಂದು ಜಿಲ್ಲೆ, ಒಂದು ಉತ್ಪನ್ನ' ಯೋಜನೆಯಡಿ ಉದ್ಯೋಗಾವಕಾಶ ಕಲ್ಪಿಸಬಹುದು: ರಾಗಪ್ರಿಯಾ - One district one product projec

ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ 'ಒಂದು ಜಿಲ್ಲೆ, ಒಂದು ಉತ್ಪನ್ನ' ಬೆಳೆ ಆಯ್ಕೆಯ ಜಿಲ್ಲಾಮಟ್ಟದ ಕೃಷಿ ರಫ್ತು ಅಭಿವೃದ್ಧಿ ಸಮಿತಿ ಸಭೆ ನಡೆಸಲಾಯಿತು.

DC meeting
DC meeting
author img

By

Published : Sep 16, 2020, 10:07 AM IST

ಯಾದಗಿರಿ: ಆತ್ಮ ನಿರ್ಭರ ಭಾರತ ಅಭಿಯಾನ ಯೋಜನೆಯಡಿ 'ಒಂದು ಜಿಲ್ಲೆಗೆ ಒಂದು ಉತ್ಪನ್ನ' ಬೆಳೆ ಯೋಜನೆಯಿಂದ ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗಾವಕಾಶ ಕಲ್ಪಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ 'ಒಂದು ಜಿಲ್ಲೆ, ಒಂದು ಉತ್ಪನ್ನ' ಬೆಳೆ ಆಯ್ಕೆಯ ಜಿಲ್ಲಾಮಟ್ಟದ ಕೃಷಿ ರಫ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯೋಜನೆ ಕುರಿತು ಪ್ರಕಟಣೆ ನೀಡಿ ನಿಯಮಾನುಸಾರ ಅರ್ಹ ಸಂಪನ್ಮೂಲ ವ್ಯಕ್ತಿಯನ್ನು ನೇಮಕ ಮಾಡಿಕೊಳ್ಳಲು ಸೂಚಿಸಿದರು. ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಈಗಾಗಲೇ ಶೇಂಗಾ ಸಂಸ್ಕರಣೆ ಮಾಡುತ್ತಿರುವ ಸ್ವ-ಸಹಾಯ ಸಂಘಗಳಿಂದ ಅರ್ಜಿಗಳನ್ನು ಅಹ್ವಾನಿಸಿ ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಿ ಅಂತಿಮಗೊಳಿಸಲು ಸೂಚಿಸಿದರು.

ಅಂತಿಮವಾಗಿ ಆಯ್ಕೆಗೊಂಡ ಫಲಾನುಭವಿಗಳಿಗೆ ಎನ್‍ಆರ್​​ಎಲ್‍ಎಂ ಸಂಯೋಗದೊಂದಿಗೆ ಸಿಎಪ್‍ಟಿಆರ್​​ಐ ಸಂಸ್ಥೆಯ ನುರಿತ ತಜ್ಞರಿಂದ ತರಬೇತಿ ನೀಡಲು ಹಾಗೂ ಯೋಜನೆ ಕುರಿತು ಹೆಚ್ಚಿನ ಪ್ರಚಾರ ನೀಡಲು ಜಂಟಿ ಕೃಷಿ ನಿರ್ದೇಶಕರಿಗೆ ಸೂಚಿಸಿದರು. ಜೊತೆಗೆ ಜಿಲ್ಲಾಮಟ್ಟದ ಸಮಿತಿ ಸಭೆಯಲ್ಲಿ ಲೀಡ್ ಬ್ಯಾಂಕ್ ಮ್ಯಾನೇಜರ್ ಮತ್ತು ಎನ್‍ಆರ್​​ಎಲ್‍ಎಂ ಕೋ-ಆರ್ಡಿನೇಟರ್ ಅವರನ್ನು ಸಮಿತಿ ಸದಸ್ಯರನ್ನಾಗಿ ನೇಮಿಸಿಕೊಳ್ಳಲು ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಕರಾದ ದೇವಿಕಾ ಆರ್. ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯಲಾಗುತ್ತಿರುವ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಕ್ಷೇತ್ರಗಳ ವಿವರಗಳನ್ನು ಸಭೆಗೆ ತಿಳಿಸಿದರು. ಜೊತೆಗೆ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರು ಜಿಲ್ಲೆಯಲ್ಲಿ ಹೆಚ್ಚಾಗಿ ಶೇಂಗಾ ಬೆಳೆಯ ಉತ್ಪನ್ನಗಳನ್ನು ಸಂಸ್ಕರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಇನ್ನು ಸಭೆಯಲ್ಲಿ ಹಾಜರಿದ್ದ ಎಲ್ಲಾ ಸದಸ್ಯರ ಅಭಿಪ್ರಾಯದ ಮೇರೆಗೆ ಶೇಂಗಾ ಬೆಳೆಯನ್ನು ಯಾದಗಿರಿ ಜಿಲ್ಲೆಗೆ ಒಂದು ಜಿಲ್ಲೆಗೆ ಒಂದು ಉತ್ಪನ್ನ, ಬೆಳೆ ಯೋಜನೆಯಡಿ ಅಂತಿಮಗೊಳಿಸಿ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.