ಯಾದಗಿರಿ: ಜಿಲ್ಲೆಯಲ್ಲಿಂದು ಮತ್ತೆ 39 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 930 ಪ್ರಕರಣಗಳ ಪೈಕಿ 821 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಅಲ್ಲಿಪೂರ ದೊಡ್ಡ ತಾಂಡಾದ 39 ವರ್ಷದ ಪುರುಷ (ಪಿ-12310) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತ ವ್ಯಕ್ತಿಯು ಅಂತರ್ರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿದ್ದಾರೆ.
ಇನ್ನು ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ.