ಬೆಂಗಳೂರು: ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಸ್ಟೆನೋಗ್ರಾಫರ್, ಜವಾನ ಸೇರಿದಂತೆ ಒಟ್ಟು 30 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ಯಾದಾಗಿರಿ ಜಿಲ್ಲಾ ನ್ಯಾಯಾಲಯದ 30 ಹುದ್ದೆಗಳ ಮಾಹಿತಿ ಹೀಗಿದೆ.
- ಜವಾನ 3
- ಜವಾನ (ಕಲ್ಯಾಣ ಕರ್ನಾಟಕ) 21
- ಟೈಪಿಸ್ಟ್ 2
- ಟೈಪಿಸ್ಟ್ (ಕಲ್ಯಾಣ ಕರ್ನಾಟಕ) 3
- ಸ್ಟೆನೋಗ್ರಾಫರ್ 1
ವಿದ್ಯಾರ್ಹತೆ: ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಟೈಪಿಸ್ಟ್ ಮತ್ತು ಸ್ಟನೋಗ್ರಾಫರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ ಪೂರ್ವ ಪರೀಕ್ಷಾ ಮಂಡಳಿಯಿಂದ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಪ್ರೌಢ ದರ್ಜೆ ಉತ್ತೀರ್ಣತೆ ಹೊಂದಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷಗಳನ್ನು ಮೀರಿರಬಾರದು. ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ.ಜಾ, ಪ.ಪಂ ಮತ್ತು ಪ್ರವರ್ಗ 1, ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಘೋಷಿಸಲಾಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 100 ರೂ. ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಟೈಪಿಂಗ್ ಪರೀಕ್ಷೆ, ಮೆರಿಟ್, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗೆ ಅಭ್ಯರ್ಥಿಗಳು ಜನವರಿಗೆ 16 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ 15 ಫೆಬ್ರವರಿ ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಫೆಬ್ರವರಿ 16 ಆಗಿದೆ.
ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಗೆ ಅಭ್ಯರ್ಥಿಗಳು yadgir.dcourts.gov.in ಇಲ್ಲಿಗೆ ಭೆಟಿ ನೀಡಬಹುದಾಗಿದೆ.
ಇದನ್ನೂ ಓದಿ: ರೈಲ್ವೆ ಕಾನ್ಸ್ಟೆಬಲ್ ಹುದ್ದೆಗಳ ನೇಮಕಾತಿ: ಉದ್ಯೋಗಾವಕಾಶದ ಸಂಪೂರ್ಣ ಮಾಹಿತಿ