ETV Bharat / state

ಸುರಪುರ: ಮಹಿಳೆ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ - ಸುರಪುರ ಮಹಿಳೆಗೆ ಬೆಂಕಿ

ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಗಂಭೀರ ಸ್ಥಿತಿಯಲ್ಲಿರುವ ಆಕೆಯನ್ನು ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ.

person-set-fire-in-woman-in-surapura
ಸುರಪುರ: ಮಹಿಳೆ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ
author img

By

Published : Oct 4, 2021, 10:47 AM IST

Updated : Oct 4, 2021, 1:33 PM IST

ಸುರಪುರ: ಮಹಿಳೆ ಮೇಲೆ ವ್ಯಕ್ತಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.

ಗಂಗಪ್ಪ ಎಂಬಾತ ಬೆಂಕಿ ಹಚ್ಚಿ ದುಷ್ಕೃತ್ಯ ಮೆರೆದ ಆರೋಪಿ. ಹಾಳ ಗ್ರಾಮದಲ್ಲಿ ಜಯಮ್ಮ (25, ಹೆಸರು ಬದಲಾಯಿಸಲಾಗಿದೆ) ಎಂಬುವರು ರಾತ್ರಿ ಮನೆಯಲ್ಲಿ ಮಲಗಿದ್ದಾಗ ಆರೋಪಿಯು ಮನೆಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ಅಕ್ಕಪಕ್ಕದ ಜನರು ವಿಷಯ ತಿಳಿದು ಗಂಭೀರ ಸ್ಥಿತಿಯಲ್ಲಿರುವ ಆಕೆಯನ್ನು ಇಂದು ಬೆಳಗ್ಗೆ ಸುರಪುರ ಆಸ್ಪತ್ರೆಗೆ ಸೇರಿಸಿದ್ದಾರೆ.

ವ್ಯಕ್ತಿಯು ತನ್ನ ಜೊತೆ ಬರುವಂತೆ ಮಹಿಳೆಗೆ ಒತ್ತಾಯಿಸಿದ್ದು, ನಿರಾಕರಿಸಿದ್ದಕ್ಕೆ ಕೋಪಗೊಂಡು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಮಹಿಳೆಯ ದೇಹ ಸಂಪೂರ್ಣ ಸುಟ್ಟು ಹೋಗಿದ್ದು, ಸುರಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸಂಬಂಧಿಕರಿಂದ ದೂರು:

ಘಟನೆ ಬಗ್ಗೆ ಮಹಿಳೆಯ ಸಂಬಂಧಿಕರು ಸುರಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಗಂಗಪ್ಪ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿರೋಧಿಸಿದ್ದಕ್ಕೆ ಆಕೆಯ ಮೇಲೆ ಹಲ್ಲೆ ನಡೆಸಿ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವುದಾಗಿ ದೂರಿದ್ದಾರೆ.

ಮಹಿಳೆಯು ಪತಿಯೊಂದಿಗೆ ಚೌಡೇಶ್ವರಿ ಹಾಳ ಗ್ರಾಮದಲ್ಲಿ ವಾಸವಿದ್ದು, ಅದೇ ಊರಿನವನಾದ ಆರೋಪಿ ಗಂಗಪ್ಪ ಈಕೆಯ ಮೇಲೆ ಈ ಹಿಂದೆಯೂ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಬಗ್ಗೆ ಹಿರಿಯರ ಸಮ್ಮುಖದಲ್ಲಿ ಪಂಚಾಯತಿ ಮಾಡಿ, ಆತನಿಗೆ ಎಚ್ಚರಿಕೆ ನೀಡಲಾಗಿತ್ತು. ಆದರೂ ಸುಮ್ಮನಿರದ ಗಂಗಪ್ಪ ನಿನ್ನೆ ರಾತ್ರಿ ಮಹಿಳೆಯ ಗಂಡ ಮನೆಯಲ್ಲಿ ಇಲ್ಲದಿರುವ ಸಮಯದಲ್ಲಿ ಆಕೆಯ ಮನೆಗೆ ಬಂದು ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆಸ್ಪತ್ರೆಗೆ ಸುರಪುರ ಠಾಣೆಯ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ, ಮಹಿಳೆಯಿಂದ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ಇಂಜೆಕ್ಷನ್ ತೆಗೆದುಕೊಂಡು ಆಸ್ಪತ್ರೆ ಸಿಬ್ಬಂದಿ ಆತ್ಮಹತ್ಯೆ: ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ

Last Updated : Oct 4, 2021, 1:33 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.