ETV Bharat / state

ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ: ಎಸ್​​ಪಿ ಡಾ.ವೇದಮೂರ್ತಿ - Yadagiri

ಅನ್ಯ ರಾಜ್ಯದ ಪ್ರಯಾಣಿಕರು 72 ಗಂಟೆಯೊಳಗಿನ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಲಸಿಕೆ ಪಡೆದಿರುವ ಪ್ರಮಾಣಪತ್ರ ಹೊಂದಿರುವುದು ಕಡ್ಡಾಯ. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಕ್ವಾರಂಟೈನ್ ಕೇಂದ್ರಕ್ಕೆ ದಾಖಲಿಸಲಾಗುವುದು- ಡಾ.ಸಿ.ಪಿ.ವೇದಮೂರ್ತಿ, ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ.

SP Dr.Vedamurthy
ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ: ಎಸ್​​ಪಿ ಡಾ.ವೇದಮೂರ್ತಿ
author img

By

Published : Jul 31, 2021, 10:45 PM IST

ಗುರುಮಠಕಲ್/ಯಾದಗಿರಿ: ಕೋವಿಡ್ 3ನೇ ಅಲೆ ಹಿನ್ನೆಲೆ ಸರ್ಕಾರದ ಆದೇಶದಂತೆ ಗುರುಮಠಕಲ್ ತಾಲೂಕಿಗೆ ಹೊಂದಿಕೊಂಡ ತೆಲಂಗಾಣ ರಾಜ್ಯದ ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ಕೋವಿಡ್ ತಪಾಸಣೆಯನ್ನು ಮಾಡಲಾಗುವುದು ಎಂದು ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಪಿ.ವೇದಮೂರ್ತಿ ಹೇಳಿದರು.

ಗಡಿ ಭಾಗದಲ್ಲಿ ಕಟ್ಟುನಿಟ್ಟಿನ ತಪಾಸಣೆ: ಎಸ್​​ಪಿ ಡಾ.ವೇದಮೂರ್ತಿ

ಸಮೀಪದ ಪುಟಪಾಕ ಗ್ರಾಮದ ತಪಾಸಣಾ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕೋವಿಡ್ ಸಾಂಕ್ರಾಮಿಕ ಸೋಂಕಿನ 3ನೇ ಅಲೆಯ ಬಗ್ಗೆ ತಜ್ಞರ ಎಚ್ಚರಿಕೆಯ ಹಿನ್ನೆಲೆಯಲ್ಲಿ ಯಾದಗಿರಿ ಜಿಲ್ಲೆಯ ಕೆಲ ಗ್ರಾಮಗಳು ತೆಲಂಗಾಣ ರಾಜ್ಯದ ಗಡಿಗೆ ಹೊಂದಿಕೊಂಡಿದ್ದು, ಆ ರಾಜ್ಯಗಳಿಂದ ಆಗಮಿಸುವ ಎಲ್ಲಾ ವಾಹನಗಳು ಮತ್ತು ಪ್ರಯಾಣಿಕರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಲಾಗುವುದು ಎಂದರು.

ಶೀಘ್ರದಲ್ಲಿಯೇ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಯಾದಗಿರಿ ಗಡಿಯಲ್ಲಿ ಪ್ರವೇಶಿಸುವ ಅನ್ಯ ರಾಜ್ಯದ ಪ್ರಯಾಣಿಕರು 72 ಗಂಟೆಗಳ ಒಳಗಿರುವಂತೆ ಕೋವಿಡ್ ನೆಗೆಟಿವ್ ವರದಿ ತಂದಿರಬೇಕು. ಸೋಂಕಿನ ಲಕ್ಷಣ ಕಂಡು ಬಂದಲ್ಲಿ ಕ್ವಾರಂಟೈನ್ ಕೇಂದ್ರಕ್ಕೆ ದಾಖಲಿಸಲಾಗುವುದು ಎಂದರು.

ಕೋವಿಡ್ ತಡೆಗಟ್ಟಲು ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸೂಚಿಸಿದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ತಾವು, ತಮ್ಮ ಕುಟುಂಬ ಮತ್ತು ಸಮಾಜದ ಆರೋಗ್ಯದ ರಕ್ಷಿಸುವಂತೆ ಅವರು ತಿಳಿಸಿದರು. ಈ ವೇಳೆ ಪಿಐ ಖಾಜಾ ಹುಸೇನ್ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.