ಯಾದಗಿರಿ: ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಅಕ್ರಮವಾಗಿ ಜೂಜಾಟ ನಡೆಯುತ್ತಿದ್ದ ಸ್ಥಳಕ್ಕೆ ಯಾದಗಿರಿ ಗ್ರಾಮೀಣ ಪೊಲೀಸರು ದಾಳಿ ನಡೆಸಿದಾಗ, ಯುವಕರ ಗುಂಪು ಪರಾರಿಯಾಗಿದೆ. ಇದರಲ್ಲಿ ಒಬ್ಬ ವ್ಯಕ್ತಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ರಮೇಶ್ ರಾಥೋಡ್ ಮೃತ ವ್ಯಕ್ತಿ. ಸಾವು ಯಾವ ರೀತಿ ಸಂಭವಿಸಿದೆ ಎಂಬುದು ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸಿದರೆ ನಿಜಾಂಶ ಹೊರಬರಲಿದೆ. ಈ ಕುರಿತು ಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆದರೆ, ಸಾರ್ವಜನಿಕ ವಲಯದಲ್ಲಿ ಈ ಸಾವಿನ ಸುತ್ತ ಹಲವು ಅನುಮಾನಗಳ ಹುತ್ತ ಹುಟ್ಟಿಕೊಂಡಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ. ವೇದಮೂರ್ತಿ ತಿಳಿಸಿದ್ದಾರೆ.
ಇದನ್ನೂ ಓದಿ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಮೇಲೆ ವಾಹನ ಓಡಾಟ: ನಜ್ಜುಗುಜ್ಜಾದ ಶವ