ಯಾದಗಿರಿ: ನನ್ನ ಮಗನೇ ಡ್ರಗ್ಸ್ ಮಾಫಿಯಾದಲ್ಲಿದ್ರೂ ಸರ್ಕಾರ ಸುಮ್ಮನೆ ಬಿಡಲ್ಲ. ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಸರ್ಕಾರ ಬದ್ಧವಿದೆ ಅಂತಾ ಯಾದಗಿರಿಯಲ್ಲಿ ಸಚಿವ ಪ್ರಭು ಚೌಹಾಣ್ ಹೇಳಿದ್ದಾರೆ.
ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಪ್ರಕರಣ ಮುಚ್ಚಿ ಹಾಕಲ್ಲ. ತಪ್ಪು ಮಾಡಿದ್ರೆ ನನ್ನನ್ನೂ ಶಿಕ್ಷಿಸಿ ಅಂತಾ ಪ್ರಧಾನಿಗಳು ಹೇಳಿದ್ದಾರೆ. ನಮ್ಮ ಸರ್ಕಾರ ಇರೋದೇ ಹೀಗೆ ಅಂತಾ ಡ್ರಗ್ಸ್ ಮಾಫಿಯಾ ಕುರಿತು ಸಚಿವ ಚೌಹಾಣ್ ಪ್ರತಿಕ್ರಿಯಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಕಡೆಚುರ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತ ದೇಶದಲ್ಲಿ ಸಂವಿಧಾನವೇ ಮೊದಲು. ಸಂವಿಧಾನದ ಎದುರು ಯಾರೂ ದೊಡ್ಡವರಲ್ಲ ಅಂತಾ ಹೇಳುವ ಮೂಲಕ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಕ್ಕೆ ಟಾಂಗ್ ನೀಡಿದ್ದಾರೆ.
ಕುಮಾರಸ್ವಾಮಿಯವರಿಗೆ ಕೆಲಸವಿಲ್ಲ, ಅದಕ್ಕೆ ಇಂತಹ ಆರೋಪ ಮಾಡುತ್ತಾರೆ. ಬರೀ ಸುಳ್ಳು ಮಾತನಾಡುತ್ತಾರೇ, ಅವರ ಆರೋಪವೆಲ್ಲಾ ಸುಳ್ಳು ಎಂದು ಹರಿಹಾಯ್ದರು. ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಶಾಮೀಲಾಗಿರಲಿ ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಜರುಗಿಸುತ್ತದೆ ಅಂತಾ ಸಚಿವ ಚೌಹಾಣ್ ವಿಶ್ವಾಸ ವ್ಯಕ್ತಪಡಿಸಿದರು.