ETV Bharat / state

ಪಾಕ್​ ಪರ ಘೋಷಣೆ ಕೂಗಿದ ಅಮೂಲ್ಯ ವಿರುದ್ಧ ಯಾದಗಿರಿಯಲ್ಲಿ ಪ್ರತಿಭಟನೆ - ಯಾದಗಿರಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟ

ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ಧ ಯಾದಗಿರಿಯಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
ಪ್ರತಿಭಟನೆ
author img

By

Published : Feb 21, 2020, 6:37 PM IST

ಯಾದಗಿರಿ: ಎಂಎಂಕೆ ಮತ್ತು ಆರ್​​ವಿಕೆ ವಿದ್ಯಾರ್ಥಿನಿ ಅಮೂಲ್ಯ ಲಿಯೋನ್ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದನ್ನು ಖಂಡಿಸಿ ನಗರದ ವಿವಿಧೆಡೆ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಶಹಪುರ ನಗರದ ಬಸವೇಶ್ವರ ವೃತ್ತದ ಬಳಿ ಜಮಾಯಿಸಿದ ನೂರಾರು ಕಾರ್ಯಕರ್ತರು, ಅಮೂಲ್ಯ ವಿರುದ್ಧ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಸರ್ಕಾರಕ್ಕೆ ಒತ್ತಾಯಿಸಿದರು.

ಅಮೂಲ್ಯ ಲಿಯೋನ್ ವಿರುದ್ಧ ಪ್ರತಿಭಟನೆ

ಇನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು, ನಗರದ ಸುಭಾಷ್ ವೃತ್ತದ ಬಳಿ ಟೈರ್​ಗೆ ಬೆಂಕಿ ಹಚ್ಚುವ ಮೂಲಕ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿ, ಹುಬ್ಬಳ್ಳಿ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಈ ಕೃತ್ಯಗಳು ನಡೆಯುತ್ತಿದ್ದು, ಇವು ಮರುಕಳಿಸದಂತೆ ದೇಶದ್ರೋಹಿ ಹೇಳಿಕೆ ನೀಡುವವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕಠಣ ಕ್ರಮಕ್ಕೆ ಮುಂದಾಗಬೇಕಾಗಿದೆ. ಕೂಡಲೇ ಅಮೂಲ್ಯ ಲಿಯೋನ್​ಳನ್ನು ಗಡಿಪಾರು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.