ಯಾದಗಿರಿ : ಗ್ರಾಮ ವಾಸ್ತವ್ಯ ಕಾರ್ಯಕ್ರಮದ ವೇದಿಕೆಯಲ್ಲಿ ಕೈ ಮತ್ತು ತೆನೆ ನಾಯಕರ ನಡುವೆ ವಾಗ್ವಾದ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಲು ಜೆಡಿಎಸ್ ಶಾಸಕ ನಾಗಣ್ಣಗೌಡ ಕಂದಕೂರ ಮಗ ಶರಣಗೌಡ ಕಂದಕೂರ ವಿರೋಧ ವ್ಯಕ್ತಪಡಿಸಿದರು. ಕೆಲ ಕಾಲ ವಾಗ್ವಾದವೂ ನಡೆಯಿತು.
ಇನ್ನು ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಸೇಡಂ ವಿಧಾನಸಭಾ ಕ್ಷೇತ್ರದ ಶಾಸಕ ರಾಜಕುಮಾರ ಪಾಟೀಲ್ ತೇಲ್ಕರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಚಂಡರಕಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಸಿಎಂ ಕುಮಾರಸ್ವಾಮಿ ವಿರುದ್ದ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಮೈತ್ರಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭೀಕರ ಬರಗಾಲ ಬಂದಾಗ ಸಿ ಎಂ ಕುಮಾರಸ್ವಾಮಿ ಜಿಲ್ಲೆಗೆ ಬಾರದೇ ಮಳೆಗಾಲ ಪರಿಸ್ಥಿತಿಯಲ್ಲಿ ಜಿಲ್ಲೆಗೆ ಬಂದು ಏನು ಮಾಡುತ್ತಾರೆ ಎಂದು ಪ್ರಶ್ನಿಸಿ, ಸಾಲ ಮನ್ನಾ ಮಾಡುವಂತೆ ಸಿಎಂಗೆ ಒತ್ತಾಯಿಸಿದರು.
ವೇದಿಕೆ ಮೇಲೆ ಕಾಂಗ್ರೆಸ್ ಜೆಡಿಎಸ್ ನಾಯಕರ ನಡುವೆ ಜಟಾಪಟಿ:
ಇನ್ನು ಗ್ರಾಮ ವಾಸ್ತವ್ಯ ಕಾರ್ಯಕ್ರಮದ ವೇದಿಕೆಯಲ್ಲಿ ಕೈ ಮತ್ತು ತೆನೆ ನಾಯಕರ ನಡುವೆ ವಾಗ್ವಾದ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಕಾರ್ಯಕ್ರಮದಲ್ಲಿ ಪ್ರಾಸ್ತವಿಕವಾಗಿ ಮಾತನಾಡಲು ಜೆಡಿಎಸ್ ಶಾಸಕ ನಾಗಣ್ಣಗೌಡ ಕಂದಕೂರ ಮಗ ಶರಣಗೌಡ ಕಂದಕೂರ ವಿರೋಧ ವ್ಯಕ್ತಪಡಿಸಿದರು.
ಸಿಎಂ ಪ್ರೋಟೋಕಾಲ ಪ್ರಕಾರ ಶಾಸಕ ನಾಗಣ್ಣಗೌಡ ಕಂದಕೂರ ಅವರಿಗೆ ಮೊದಲು ಮಾತನಾಡಲು ಅವಕಾಶ ಕೊಡಬೇಕು. ತದನಂತರೆ ಜಿಲ್ಲಾ ಉಸ್ತವಾರಿ ಸಚಿವ ರಾಜಶೇಖರ ಪಾಟೀಲ್ ಅವರಿಗೆ ಮಾತನಾಡಲು ಅವಕಾಶ ನೀಡಿ ಎಂದು ವೇದಿಕೆ ಮೇಲೆ ವಾಗ್ವಾದ ನಡೆಸಿದರು.
ಬಳಿಕ ಜಿಲ್ಲಾ ಉಸ್ತವಾರಿ ಸಚಿವ ರಾಜಶೇಖರ ಪಾಟೀಲ್ ಮಾತನಾಡದೇ ವೇದಿಕೆಯ ಡೆಸ್ಕ್ನಿಂದ ತೆರಳಿ ತಮ್ಮ ಆಸನ ಅಲಂಕರಿಸಿದರು.