ಯಾದಗಿರಿ: ಕಲಬುರಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ ಹೆಸರಿಡುವಂತೆ ಒತ್ತಾಯಿಸಿ ಗೋರಸೇನೆ ವತಿಯಿಂದ ಜಿಲ್ಲೆಯ ಶಹಪುರ ನಗರದಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ನಗರದ ಬಸವೇಶ್ವರ ವೃತ್ತದಿಂದ ತಹಶೀಲ್ದಾರರ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸುವ ಮೂಲಕ ಕೂಡಲೇ ಸರ್ಕಾರ ಕಲಬುರಗಿ ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡುವಂತೆ ಆಗ್ರಹಿಸಿದರು.
ವಿಮಾನ ನಿಲ್ದಾಣದ ಕಾಮಗಾರಿ ವೇಳೆ ಧ್ವಂಸಗೊಳಿಸಿದ್ದ ಸಂತ ಸೇವಲಾಲ್ ದೇಗುಲವನ್ನು ಪುನರ್ನಿರ್ಮಾಣ ಮಾಡಬೇಕು ಮತ್ತು ವಿಮಾನ ನಿಲ್ದಾಣಕ್ಕೆ ಜಮೀನು ನೀಡಿದಂತಹ ರೈತರ ಕುಟುಂಬಗಳಿಗೆ ಕೆಲಸ ಕಲ್ಪಿಸಿ ಕೊಡುವಂತೆ ಪ್ರತಿಭಟನಾಕಾರರು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.