ಸುರಪುರ : ಖಾಸಗಿ ವಾಹನಗಳು ಪ್ರಯಾಣಿಕರಿಂದ ದುಬಾರಿ ದರ ಪಡೆಯುತ್ತಿವೆ ಎಂದು ಆರೋಪಿಸಿ ಸಾಮೂಹಿಕ ಸಂಘಟನೆಗಳಿಂದ ನಗರದಲ್ಲಿ ಪ್ರತಿಭಟಿಸಲಾಯಿತು.
ನಗರದ ಬಸ್ ನಿಲ್ದಾಣದ ಮುಂಭಾಗ ಡಾ. ಬಿ ಆರ್ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ಒಂದು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದ ಸಾಮೂಹಿಕ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಸಾರಿಗೆ ನೌಕರರ ಮುಷ್ಕರವನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ವಾಹನಗಳು ಪ್ರಯಾಣಿಕರನ್ನು ಕರೆದೊಯ್ಯಲು ದುಬಾರಿ ಹಣ ವಿಧಿಸುತ್ತಿವೆ.
ಹೀಗಾಗಿ, ಖಾಸಗಿ ವಾಹನಗಳ ದರ ನಿಗದಿಪಡಿಸಿ ಘೋಷಿಸಬೇಕು ಮತ್ತು ಸಾರಿಗೆ ನೌಕರರ ಬೇಡಿಕೆಯನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಇಲ್ಲವಾದ್ರೆ ಸಾಮೂಹಿಕ ಸಂಘಟನೆಗಳು ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಲಿವೆ ಎಂದು ಎಚ್ಚರಿಸಿದರು.
ಓದಿ: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ಗೆ ಕೊರೊನಾ ದೃಢ.. ಬೇಗ ಗುಣಮುಖರಾಗಲೆಂದು ಪ್ರಾರ್ಥಿಸಿ ಬೆಂಬಲಿಗರಿಂದ ವಿಶೇಷ ಪೂಜೆ