ಸುರಪುರ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ತಹಶೀಲ್ದಾರ್ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಆಶಾ ಕಾರ್ಯಕರ್ತೆಯರ ಸಂಘದ ತಾಲೂಕು ಅಧ್ಯಕ್ಷೆ ಪುಷ್ಪಲತಾ ಮಾತನಾಡಿ, ಇಂದು ನಾವು ಜೀವದ ಹಂಗು ತೊರೆದು ಕೋವಿಡ್-19 ನಿರ್ಮೂಲನೆಗಾಗಿ ಹೋರಾಡುತ್ತಿದ್ದೇವೆ. ಹೀಗಾಗಿ, ನಮ್ಮ ಜೀವದ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿವಹಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸಾವಿರಾರು ಆಶಾ ಕಾರ್ಯಕರ್ತೆಯರು ಗೌರವ ಧನಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಅದು ನಮ್ಮ ಕುಟುಂಬ ನಿರ್ವಹಣೆಗೆ ಸಾಕಾಗದು. ಆದ್ದರಿಂದ ಕನಿಷ್ಠ 12 ಸಾವಿರ ತಿಂಗಳ ಗೌರವ ಧನ ನೀಡಬೇಕು. ಅಲ್ಲದೆ, ನಮಗೆ ಹೆಚ್ಚಿನ ಜೀವರಕ್ಷಕ ಸಲಕರಣೆಗಳನ್ನು ನೀಡಬೇಕೆಂದು ಆಗ್ರಹಿಸಿದರು. ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರಿಗೆ ಮನವಿ ಸಲ್ಲಿಸಿದರು.