ಯಾದಗಿರಿ: ರಾಜ್ಯ ಸರ್ಕಾರದ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ನಿರ್ಧಾರ ಖಂಡಿಸಿ ನಗರದಲ್ಲಿಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.
ನಗರದ ಸುಭಾಷ್ ವೃತ್ತದ ಬಳಿ ಟೈರ್ಗೆ ಬೆಂಕಿ ಹಚ್ಚಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಶರಣು ಗದ್ದುಗೆ ನೇತೃತ್ವದಲ್ಲಿ ಹೋರಾಟ ನಡೆಸಿದ ಕಾರ್ಯಕರ್ತರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದರು. ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೋರಾಟಗಾರರು, ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಕೈ ಬಿಡುವಂತೆ ಒತ್ತಾಯಿಸಿದರು.
ಇದೇ ವೇಳೆ ಮುಂದಿನ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ನಡೆಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು. ನಂತರ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.