ಯಾದಗಿರಿ: ಸಿಎಎ,ಎನ್ಆರ್ಸಿ ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವ ಮೂಲಕ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಿಎಎ ಹಾಗೂ ಎನ್ಆರ್ಸಿ ಕಾಯ್ದೆಗಳು ಸಂವಿಧಾನ ವಿರೋಧಿಯಾಗಿವೆ. ಕೇಂದ್ರ ಸರ್ಕಾರ ಕೂಡಲೇ ಈ ಕಾಯ್ದೆ ಹಿಂಪಡೆಯುವಂತೆ ಪ್ರತಿಭಟನಾನಿರತರು ಆಗ್ರಹಿಸಿದರು. ಈ ಕಾಯ್ದೆಗಳನ್ನ ವಾಪಸ್ ಪಡೆಯದೇ ಹೋದ್ರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.