ಸುರಪುರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಟ್ಟುವ ಮತ್ತು ಕಲ್ಲು ಹೊಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ಸುರಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಅನೇಕ ಕಾರ್ಮಿಕರು, ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಮನವಿ ಮಾಡಿದ್ದರೂ ಕೂಡ ಅದನ್ನು ನಿರ್ಲಕ್ಷಿಸಲಾಗುತ್ತಿದೆ. ಇದನ್ನು ಖಂಡಿಸುವುದಾಗಿ ಹೇಳಿದರು.
ಕಾರ್ಮಿಕರ ಗುರುತಿನ ಚೀಟಿ ಹೊಂದಿರುವ ಕಾರ್ಮಿಕರಿಗೆ ಸರ್ಕಾರಿ ಜಮೀನು ಮತ್ತು ಖಾಲಿ ನಿವೇಶನಗಳನ್ನು ನೀಡಬೇಕು. 60 ವರ್ಷ ಪೂರೈಸಿದವರಿಗೆ ಮಾಸಿಕ 5,000 ನಿವೃತ್ತಿ ವೇತನ ನೀಡಬೇಕು. ರಾಜ್ಯಾದ್ಯಂತ ಸೇವಾ ಸಿಂಧು ಕೇಂದ್ರಗಳಲ್ಲಿ ನಿರ್ಮಾಣವಾದ ನಕಲಿ ಗುರುತಿನ ಚೀಟಿಗಳನ್ನು ರದ್ದುಪಡಿಸಬೇಕು. ಕಲ್ಯಾಣ ಮಂಡಳಿಯಿಂದ ಕೈಬರಹದ ಗುರುತಿನ ಚೀಟಿಯನ್ನು ಪಡೆದಂತಹ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಮಂಜೂರು ಮಾಡಬೇಕು ಸೇರಿದಂತೆ ಇನ್ನೂ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಫೋಟೋ ಪೋಸ್ಟ್ ಮಾಡಿ ಕೈ-ಕಮಲ ನಡುವೆ ಟ್ವೀಟ್ ವಾರ್
ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಿಂದ ಕೆಲಕಾಲ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಾರ್ಮಿಕ ಸಚಿವರಿಗೆ ಬರೆದ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೂಫಿಯಾ ಸುಲ್ತಾನ್ ಅವರ ಮೂಲಕ ಸಲ್ಲಿಸಿದರು.