ಯಾದಗಿರಿ: ಪ್ರವಾಹ ಸಂತ್ರಸ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸೋಶಿಯಲಿಸ್ಟ್ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಸುಭಾಶ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಎಐಡಿಎಸ್ಒ ಕಾರ್ಯಕರ್ತರು, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೃಷ್ಣ ಹಾಗೂ ಭೀಮಾ ನದಿ ಪ್ರವಾಹದಲ್ಲಿ ಸಿಲುಕಿದ ಸಂತ್ರಸ್ತರಿಗೆ ಜಿಲ್ಲಾಡಳಿತ ಯಾವುದೇ ಪರಿಹಾರ ನೀಡದೆ ಅವರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದರು.
ಜಿಲ್ಲೆಯ ಸುರಪುರ ಹಾಗೂ ಶಹಾಪುರ ತಾಲೂಕಿನಲ್ಲಿ ಕೃಷ್ಣ ಹಾಗೂ ಭೀಮಾ ನದಿಯ ದಡದಿಂದ ಸಾವಿರಾರು ರೈತರ ಜೀವನ ಅಸ್ಥವ್ಯಸ್ತವಾಗಿದ್ದು, ರೈತರು ಬೀದಿ ಪಾಲಾಗಿದ್ದಾರೆ. ಪ್ರವಾಹದಲ್ಲಿ ಮನೆ ಮಠ ಕಳೆದುಕೊಂಡ ಸಂತ್ರಸ್ತರಿಗೆ ಹಾಗೂ ರೈತರಿಗೆ ಜಿಲ್ಲಾಡಳಿತ ಉಚಿತ ಬೀಜ, ಗೊಬ್ಬರ ಒದಗಿಸುವಂತೆ ಹಾಗೂ ಪ್ರವಾಹಕ್ಕೆ ತುತ್ತಾದ ಗ್ರಾಮಗಳಿಗೆ ವಿದ್ಯುತ್, ಕುಡಿಯುವ ನೀರು ಸೌಲಭ್ಯ ನೀಡುವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತರಿಗೆ ಮನವಿ ಸಲ್ಲಿಸಿದರು.