ವಿಜಯಪುರ : ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಧನ ಸಹಾಯ ಹಾಗೂ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಕರ್ನಾಟಕಕ್ಕೆ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಕೊರೊನಾ ಭೀತಿಯಿಂದ ಕಟ್ಟಡ ಹಾಗೂ ಇತರೆ ಕಾರ್ಮಿಕರು ಸರಿಯಾದ ಉದ್ಯೋಗವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಟುಂಬ ನಿರ್ವಹಣೆ ಮಾಡಲಾಗದ ಸ್ಥಿತಿಯಲ್ಲಿದ್ದಾರೆ. ಆದರೂ ರಾಜ್ಯ ಸರ್ಕಾರ ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿಲ್ಲ.
ಇತ್ತ ಹೊಸದಾಗಿ ಕಾರ್ಮಿಕ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ ಕಾರ್ಮಿಕರಿಗೆ ಅಧಿಕಾರಿಗಳು ಸರಿಯಾಗಿ ಕಾರ್ಡ್ ವಿತರಣೆ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ದೂರಿದರು. ಇನ್ನೂ ಎಲ್ಲ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ಸರ್ಕಾರ ಉಚಿತವಾಗಿ ಆರೋಗ್ಯ ಸೇವೆ ನೀಡಬೇಕು. ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರಿಗೆ ಆರ್ಥಿಕ ನೆರವು ಸೇರಿ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.