ETV Bharat / state

ಗುರುಮಠಕಲ್: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ - all india banjara society

ಹೈದರಾಬಾದ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅರೋಪಿಗೆ ಕಠಿಣ ಶಿಕ್ಷೆ ಜತೆ ಸಂತ್ರಸ್ತೆ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಅಲ್ ಇಂಡಿಯಾ ಬಂಜಾರಾ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆ
ಪ್ರತಿಭಟನೆ
author img

By

Published : Sep 16, 2021, 10:55 AM IST

ಗುರುಮಠಕಲ್: ಹೈದರಾಬಾದ್​ನ ಸಯೀದಾಬಾದ್​ನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ತಾಲೂಕು ಅಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವತಿಯಿಂದ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಕನಕ ವೃತ್ತದ ಮೂಲಕ ಬಸ್‌ನಿಲ್ದಾಣ, ಅಂಬಿಗರ ಚೌಡಯ್ಯ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ತಹಶೀಲ್​​​ ಕಚೇರಿ ವರೆಗೆ ಮೇಣದ ಬತ್ತಿ ಹಿಡಿದುಕೊಂಡು ತೆಲಂಗಾಣ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್​ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ ತಾಲೂಕಿನ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಚಿನ್ನಾ ರಾಠೋಡ್ ಮಾತನಾಡಿ, ಅತ್ಯಾಚಾರ ಪ್ರಕರಣದ ಆರೋಪಿಯನ್ನು ಕೂಡಲೇ ಬಂಧಿಸಿ ಮರಣದಂಡನೆಗೆ ಗುರಿಪಡಿಸಬೇಕು.

ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದಲ್ಲಿ ಯಾರಿಗಾದರೂ ಒಬ್ಬರಿಗೆ ಸರ್ಕಾರಿ ನೌಕರಿ ಕಲ್ಪಿಸಿಕೊಡಬೇಕು. ಮುಂದೆ ಅತ್ಯಾಚಾರ ಘಟನೆಗಳು ನಡೆಯದಂತೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.