ಸುರಪುರ: ಚೌಡೇಶ್ವರಿಹಾಳ ಗ್ರಾಮದಲ್ಲಿ ಪೆಟ್ರೋಲ್ ಸುರಿದು ಮಹಿಳೆಗೆ ಬೆಂಕಿ ಹಚ್ಚಿದ ಘಟನೆ ಖಂಡಿಸಿ ಮಹಿಳೆಯ ಶವವಿಟ್ಟು ಸುರಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಭಾನುವಾರ ರಾತ್ರಿ ಸುರಪುರ ತಾಲೂಕಿನ ಚೌಡೇಶ್ವರಿ ಹಾಳ ಗ್ರಾಮದಲ್ಲಿ ಮಹಿಳೆಯೊಬ್ಬಳಿಗೆ ದುಷ್ಕರ್ಮಿಯೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಖಂಡಿಸಿ ಸುರಪುರ ಮಾತ್ಮಗಾಂಧಿ ವೃತ್ತದಲ್ಲಿ ಮಹಿಳೆಯ ಶವವಿಟ್ಟು ಪ್ರತಿಭಟನೆ ನಡೆಸಲಾಯಿತು. ನೂರಾರು ಜನ ಪ್ರತಿಭಟನೆಯಲ್ಲಿ ಭಾಗವಹಿಸಿ ಪೊಲೀಸ್ ಇಲಾಖೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಹಾರ ಧನವಾಗಿ 25 ಲಕ್ಷ ರೂ. ನಗದು, 5 ಎಕರೆ ಜಮೀನು ನೀಡಬೇಕು ಮತ್ತು ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸುತ್ತಿದ್ದಾರೆ. ಈ ವೇಳೆ ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.
ಓದಿ: ಸುರಪುರ: ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿ