ಸುರಪುರ : ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಬಿಸಿಯೂಟ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ, ಸಿಐಟಿಯು ಹಾಗೂ ಎಐಯುಟಿಯುಸಿ ಸಂಘಟನೆಗಳ ನೇತೃತ್ವದಲ್ಲಿ ಸುರಪುರ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರಿಗೆ 21 ಸಾವಿರ ರೂ, ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ರೂ, ಬಿಸಿಯೂಟದ ನೌಕರರಿಗೂ ಕನಿಷ್ಟ 10 ಸಾವಿರ ರೂ ವೇತನ ನೀಡಬೇಕು. ಕೋವಿಡ್ ಸೇವೆಯಲ್ಲಿದ್ದಾಗ ಕೊರೊನಾ ಸೊಂಕಿಗೊಳಗಾದರೆ 10 ಲಕ್ಷ ರೂ. ಪರಿಹಾರ ನೀಡಬೇಕು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಕೊರೊನಾ ಸೇವೆಗಾಗಿ ಪಿಪಿಇ ಕಿಟ್, ಫೀವರ್ ಚೆಕ್ ಮಷಿನ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ನೀಡಬೇಕು ಸೇರಿದಂತೆ 17 ಬೇಡಿಕೆಗಳನ್ನು ಈಡೇರಿಸಲು ಎಐಟಿಯುಸಿ ಜಿಲ್ಲಾ ಉಪಾಧ್ಯಕ್ಷ ದೇವಿಂದ್ರಪ್ಪ ಪತ್ತಾರ ಹಾಗೂ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಶರಣಗೌಡ ಗೂಗಲ್ ಸರ್ಕಾರಕ್ಕೆ ಒತ್ತಾಯಿಸಿದರು.
ನಂತರ ರಾಜ್ಯಪಾಲರಿಗೆ ಮನವಿಯನ್ನು ಗ್ರೇಡ್-2 ತಹಶೀಲ್ದಾರ್ ಸೋಫಿಯಾ ಸುಲ್ತಾನ್ ಅವರ ಮೂಲಕ ಸಲ್ಲಿಸಿದರು.